ಕೊಪ್ಪಳ: ಸಿಎಂ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸೀಟಿನಿಂದ ಕೆಳಗಿಳಿಸಲು ಯಾರಿಂದಲೂ ಸಾಧ್ಯವಿಲ್ಲ. ಇನ್ನೂ 3 ವರ್ಷ, 10 ತಿಂಗಳು ಜನಪರ ಆಡಳಿತ ನೀಡಲಿ ಎಂಬುದು ನಮ್ಮ ಆಶಯ ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು. ಬಿಜೆಪಿ, ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡ ಮೇಲೆ ಅವರಿಗೆ ಹಿನ್ನಡೆಯಾಗಿದೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ 1 ಸೀಟು ಬಂದಿದ್ದ ನಮಗೆ ಈ ಚುನಾವಣೆಯಲ್ಲಿ 9 ಸೀಟು ಬಂದಿರುವುದರಿಂದ ಸಿಎಂ ಸಿದ್ದರಾಮಯ್ಯ ಅವರನ್ನು ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ’ ಎಂದು ಹೇಳಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಅಧಿಕಾರಿಗಳ ತಪ್ಪಿದೆ. ಆದರೆ, ಸಿದ್ದರಾಮಯ್ಯನವರ ಮೇಲೆ ವಾಲ್ಮೀಕಿ ಮತ್ತು ಮುಡಾ ಹಗರಣ ಆರೋಪ ಮಾಡುತ್ತಿದ್ದಾರೆ. ವಾಸ್ತವ ಸ್ಥಿತಿ ಅರ್ಥ ಮಾಡಿಕೊಳ್ಳಬೇಕು. ಯಾವುದೇ ವಿಷಯವಿಲ್ಲದೆ ಪಾದಯಾತ್ರೆ ಮಾಡುತ್ತಿದ್ದಾರೆ. ರಾಜಕೀಯವಾಗಿ ಸಿಎಂ ಅವರ ಹೆಸರು ಕೆಡಿಸುವ ದುರುದ್ದೇಶವಿದೆ. ಅವರ ಹೆಸರಿನಲ್ಲಿ ಮೊಕದ್ದಮೆಗೆ ಅನುಮತಿ ನೀಡಲು ಬರುವುದಿಲ್ಲ. ರಾಜ್ಯಪಾಲರು ಒತ್ತಡಕ್ಕೆ ಮಣಿದು ಅನುಮತಿ ನೀಡಿದರೆ ಹೈಕೋರ್ಟ್ ಮೊರೆ ಹೋಗಲಾಗುವುದು’ ಎಂದರು.