ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಗೆದ್ದಿರುವ ಭಾರತ (India Vs Australia) ತಂಡಕ್ಕೆ ಇದೀಗ ಏಕದಿನ ಸರಣಿಯನ್ನೂ ಗೆಲ್ಲುವ ಅವಕಾಶ ಸಿಕ್ಕಿದೆ. ಉಭಯ ದೇಶಗಳ ನಡುವಿನ ಮೂರು ಏಕದಿನ ಪಂದ್ಯಗಳ ಸರಣಿ ಶುಕ್ರವಾರ (ಮಾ.19) ಆರಂಭವಾಗಿದೆ. ಈಗಾಗಲೇ ಸರಣಿಯ ಮೊದಲ ಪಂದ್ಯ ಮುಂಬೈನಲ್ಲಿ ನಡೆದಿದ್ದು, ಭಾರತ ಐದು ವಿಕೆಟ್ಗಳಿಂದ ಗೆದ್ದು ಬೀಗಿದೆ. ಈ ಗೆಲುವಿನೊಂದಿಗೆ ಟೀಂ ಇಂಡಿಯಾ (Team India) ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಇದೀಗ ಎರಡನೇ ಏಕದಿನ ಪಂದ್ಯ ವಿಶಾಖಪಟ್ಟಣದಲ್ಲಿ (visakhapatnam) ನಡೆಯುತ್ತಿದ್ದು, ಈ ಪಂದ್ಯದಲ್ಲೂ ಟೀಂ ಇಂಡಿಯಾ ಗೆದ್ದರೆ, ಈ ಸರಣಿಯನ್ನೂ ಭಾರತ ತನ್ನ ಖಾತೆಗೆ ಹಾಕಿಕೊಳ್ಳಲಿದೆ. ಇತ್ತ ಮೊದಲ ಪಂದ್ಯ ಸೋತಿರುವ ಆಸ್ಟ್ರೇಲಿಯಾ, ಈ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸಲು ಪ್ರಯತ್ನಿಸಲಿದೆ.
ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್ಗಳು ಅಮೋಘ ಆಟ ಪ್ರದರ್ಶಿಸಿದರು. ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ ಇಬ್ಬರೂ ತಲಾ 3 ವಿಕೆಟ್ ಪಡೆದರು. ಹೀಗಾಗಿ ಕಾಂಗರೂಗಳು ಕೇವಲ 188 ರನ್ಗಳಿಗೆ ಆಲೌಟ್ ಆಗಿದ್ದರು. ಆದರೆ ಈ 188 ರನ್ಗಳ ಗುರಿ ಬೆನ್ನತ್ತಿದ ಆತಿಥೇಯರ ಆರಂಭವೂ ಕಳಪೆಯಾಗಿತ್ತು. ತಂಡದ ಅಗ್ರ ಕ್ರಮಾಂಕ ಅಟ್ಟರ್ ಫ್ಲಾಪ್ ಆಗಿತ್ತು. ಆದರೆ ಐದನೇ ವಿಕೆಟ್ಗೆ ಜೊತೆಯಾದ ಕೆಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾ ತಂಡವನ್ನು ಗೆಲುವಿನ ದಡ ಸೇರಿಸಿದರು. ಇದೀಗ ಎರಡನೇ ಪಂದ್ಯಕ್ಕೆ ಸಜ್ಜಾಗಿರುವ ಟೀಂ ಇಂಡಿಯಾ ತಂಡದಲ್ಲಿರುವ ನ್ಯೂನತೆಗಳನ್ನು ಸರಿಪಡಿಸಿಕೊಂಡು ಕಣಕ್ಕಿಳಿಯಬೇಕಿದೆ.
ಎರಡನೇ ಏಕದಿನ ಪಂದ್ಯದ ಪೂರ್ಣ ವಿವರ ಇಲ್ಲಿದೆ
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2ನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯ ಮಾರ್ಚ್ 19 (ಇಂದು) ನಡೆಯಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2 ನೇ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯವು ವಿಶಾಖಪಟ್ಟಣಂನ ಡಾ ವೈಎಸ್ ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಭಾರತ-ಆಸ್ಟ್ರೇಲಿಯಾ ನಡುವಿನ 2ನೇ ಏಕದಿನ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯ ಶುಕ್ರವಾರ ಮಧ್ಯಾಹ್ನ 01:30 ಕ್ಕೆ ಆರಂಭವಾಗಲಿದೆ. ಒಂದು ಗಂಟೆಗೆ ಟಾಸ್ ನಡೆಯಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2 ನೇ ಏಕದಿನ ಪಂದ್ಯದ ನೇರ ಪ್ರಸಾರ ಎಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯದ ನೇರ ಪ್ರಸಾರ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ಚಾನೆಲ್ಗಳಲ್ಲಿ ಇರಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2 ನೇ ಏಕದಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್ಸ್ಟಾರ್ನಲ್ಲಿ ಇರಲಿದೆ.