ಬ್ರಿಟನ್ನಲ್ಲಿ ಸ್ಥಳೀಯರು, ಬಲಪಂಥೀಯರು ಮತ್ತು ವಲಸಿಗ ಮುಸ್ಲಿಮರ ನಡುವೆ ನಡೆಯುತ್ತಿರುವ ಸಂಘರ್ಷ ದಿನದಿಂದ ದಿನಕ್ಕೆ ತಾರಕಕ್ಕೆ ಏರುತ್ತಿದೆ. ಸಣ್ಣದಾಗಿ ಆರಂಭವಾದ ಸಂಘರ್ಷ ಇದೀಗ ಹಿಂಸಾಚಾರಕ್ಕೆ ತಿರುಗಿದ್ದು ಘಟನೆಯಲ್ಲಿ ಇದುವರೆಗೂ ಬ್ರಿಟನ್ ಪೊಲೀಸರು ಸುಮಾರು 148 ಮಂದಿಯನ್ನು ಬಂಧಿಸಿದ್ದಾರೆ.
ನೃತ್ಯ ತರಗತಿ ವೇಳೆ ಮೂವರು ಬ್ರಿಟಿಷ್ ಬಾಲಕಿಯರನ್ನು ಇತ್ತೀಚೆಗೆ ಹತ್ಯೆ ಮಾಡಲಾಗಿತ್ತು. ಬಳಿಕ ಕೃತ್ಯ ಎಸಗಿದ ಆಕ್ಸೆಲ್ ರುಡಕುಬಾನಾ 17 ವರ್ಷದ ಯುವಕನನ್ನು ಬಂಧಿಸಲಾಗಿತ್ತು. ಹಂತಕ ಮುಸ್ಲಿಂ ವಲಸಿಗ ಎಂಬ ವದಂತಿ ಹರಡಿದ್ದರಿಂದ ಈಗ ಸ್ಥಳೀಯರು ಮತ್ತು ಬಲಪಂಥೀಯ ಸಂಘಟನೆಗಳು ಪ್ರತಿಭಟನೆಗಳು ಇಳಿದಿವೆ. ಆದರೆ ಹಂತಕ ಕ್ರಿಶ್ಚಿಯನ್ ಎಂದು ವರದಿಯಾಗಿದೆ.
ಇತ್ತೀಚಿಗೆ ಮುಕ್ತಾಯಗೊಂಡ ಸಂಸತ್ ಚುನಾವಣೆ ವೇಳೆ ಮುಸ್ಲಿಮರಿಗೆ ಹಲವು ಭರವಸೆ ನೀಡಿ ಕೀರ್ ಸ್ಟಾರ್ಮರ್ ಪ್ರಧಾನಿಯಾಗಿ ಆಯ್ಕೆಯಾಗಿದ್ದರು. ಮುಸ್ಲಿಮರಿಗೆ ನೀಡಿದ ಭರವಸೆಗಳಿಗೆ ಸ್ಥಳೀಯರು ಮತ್ತು ಬಲಪಂಥೀಯ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದವು. ಈಗ ಮೂವರು ಬಾಲಕಿಯರ ಮೇಲೆ ಹತ್ಯೆ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿದ್ದಂತೆ ಪ್ರತಿಭಟನೆ ಈಗ ಸಂಘರ್ಷದ ಸ್ವರೂಪ ಪಡೆದುಕೊಂಡಿದೆ. ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಈಗ ಪ್ರತಿಭಟನಾಕರರ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಲಿವರ್ಪೂಲ್, ಹಲ್, ಬ್ರಿಸ್ಟಲ್, ಲೀಡ್ಸ್ನಲ್ಲಿ ನಡೆದ ಘರ್ಷಣೆಗಳಲ್ಲಿ ಪ್ರತಿಭಟನಾಕಾರರು ಸರ್ಕಾರಿ ಕಚೇರಿಗೆ ನುಗ್ಗಿ ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ಮ್ಯಾಂಚೆಸ್ಟರ್ನಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆದಿವೆ.
ಲೀಡ್ಸ್ನಲ್ಲಿ ಸರಿಸುಮಾರು 150 ಜನರು ಇಂಗ್ಲಿಷ್ ಧ್ವಜಗಳನ್ನು ಹಿಡಿದುಕೊಂಡು, ನೀವು ಇನ್ನು ಮುಂದೆ ಇಂಗ್ಲಿಷ್ ಪ್ರಜೆಗಳಲ್ಲ ಎಂದು ಎಂದು ವಲಸಿಗರ ವಿರುದ್ಧ ಘೋಷಣೆ ಕೂಗಿದ್ದಾರೆ. ಮುಸ್ಲಿಮರು ಅಲ್ಲಾ ಹು ಅಕ್ಬರ್ ಕೂಗುತ್ತಾ ಮಾರಕಾಸ್ತ್ರ ಹಿಡಿದು ಓಡಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.