ಯಾದಗಿರಿ:- ಯಾದಗಿರಿ PSI ಅನುಮಾನಾಸ್ಪದ ಸಾವು ಕೇಸ್ ಗೆ ಸಂಬಧಪಟ್ಟಂತೆ ಶಾಸಕ ಚೆನ್ನಾರೆಡ್ಡಿ ಲೆಟರ್ ಹೆಡ್ ಪತ್ತೆಯಾಗಿದೆ.ಕಾನೂನು ಸುವ್ಯವಸ್ಥೆ ಪೋಸ್ಟಿಂಗ್ ಬೇರೆಯವರಿಗೆ ಕೊಟ್ಟ ಹಿನ್ನೆಲೆಯಲ್ಲಿ ಅಪರಾಧ ವಿಭಾಗದ ಪೋಸ್ಟಿಂಗ್ ಕೊಡಿ ಎಂದು ಪರಶುರಾಮ ಕೇಳಿದ್ದರು.
ಇದೇ ಕಾರಣಕ್ಕೆ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಯಾದಗಿರಿ ನಗರ ಠಾಣೆಯ ಅಪರಾಧ ವಿಭಾಗದ ಪಿಎಸ್ಐ ಪೋಸ್ಟಿಂಗ್ಗಾಗಿ ಲೆಟರ್ ಹೆಡ್ ನೀಡಿದ್ದರು. ಈ ಲೆಟರ್ ಹೆಡ್ ಸಿಐಡಿ ಅಧಿಕಾರಿಗಳು ಮಹಜರು ವೇಳೆ ಪತ್ತೆಯಾಗಿದ್ದು, ವಶಕ್ಕೆ ಪಡೆದಿದ್ದಾರೆ.
ಯಾದಗಿರಿ ನಗರ ಠಾಣೆಯ ಅಪರಾಧ ವಿಭಾಗದ ಪಿಎಸ್ಐ ಪೋಸ್ಟಿಂಗ್ಗಾಗಿ ಶಾಸಕ ಚೆನ್ನಾರೆಡ್ಡಿ 15 ಲಕ್ಷ ರೂ. ಕೇಳಿದ್ದರು ಎನ್ನಲಾಗಿದೆ. ಹೀಗಾಗಿ ಪಿಎಸ್ಐ ಪರಶುರಾಮ ಹಣ ಹೊಂದಿಸುತ್ತಿದ್ದರು.
ವಸತಿ ಗೃಹದಲ್ಲಿ ಪೋಸ್ಟಿಂಗ್ಗಾಗಿ ಕೂಡಿಟ್ಟ 7.33 ಲಕ್ಷ ನಗದು ಸಿಕ್ಕಿದ್ದು, ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪರಶುರಾಮ ಅವರಿಗೆ ಸೇರಿದ ನಾಲ್ಕು ಬ್ಯಾಂಕ್ ಖಾತೆಯಲ್ಲಿನ ಹಣದ ಮಾಹಿತಿಯನ್ನೂ ಸಹ ಸಿಐಡಿ ಅಧಿಕಾರಿಗಳು ಪಡೆದುಕೊಂಡಿದ್ದಾರೆ.
ಜೊತೆಗೆ ಇಲಾಖಾ ರಿವಾಲ್ವರ್ (ಬಂದೂಕು), ಸಿಮ್ಕಾರ್ಡ್, ಮೊಬೈಲ್ ಮತ್ತು ವಾಕಿಟಾಕಿ ಜಪ್ತಿ ಮಾಡಿದ್ದಾರೆ.
ಮೃತ ಪಿಎಸ್ಐ ಪರಶುರಾಮ ಪ್ರತಿಯೊಂದು ಕರೆಗಳನ್ನು ರೆಕಾರ್ಡ್ ಮಾಡಿಕೊಳ್ಳುತ್ತಿದ್ದರು. ಪೋಸ್ಟಿಂಗ್ ಆಗದೆ ಇರುವ ಬಗ್ಗೆ, ಸ್ನೇಹಿತರು ಮತ್ತು ಕಟುಂಬಸ್ಥರ ಮುಂದೆ ಪೋಸ್ಟಿಂಗ್ ಹಣ ಕೇಳಿರುವ ದೂರವಾಣಿ ಮೂಲಕ ಸಂಭಾಷಣೆ ಮಾಡಿದ್ದಾರೆ. ಎಲ್ಲ ಸಂಭಾಷಣೆಗಳ ಆಡಿಯೋ ಮೊಬೈಲ್ನಲ್ಲಿವೆ.