ಬೆಂಗಳೂರು: ಬೆಂಗಳೂರಿನಲ್ಲಿ ರ್ಯಾಪಿಡೋ ಬೈಕ್ ಟ್ಯಾಕ್ಸಿಯನ್ನು ನಿಷೇಧಿಸುವಂತೆ ನಗರದ 21 ಆಟೋ ಚಾಲಕರ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿವೆ. ಈ ಹಿನ್ನಲೆ ನಾಳೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಟೋ ಚಾಲಕರಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ. ಇಂದು ಮಧ್ಯರಾತ್ರಿ 12 ಗಂಟೆಯಿಂದ ನಾಳೆ ಮಧ್ಯರಾತ್ರಿಯವರೆಗೆ ಆಟೋ ಸಂಚಾರ ಸಂಪೂರ್ಣ ಬಂದ್ ಆಗಲಿದೆ. ರಾಜ್ಯದಲ್ಲಿ ಅನಧಿಕೃತ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹಿಸಿ, ರಾಜ್ಯ ಸರ್ಕಾರಕ್ಕೆ 3 ದಿನಗಳ ಗಡುವು ನೀಡಿದ್ದರು. ಇಂದಿಗೆ ಸಾರಥಿಗಳು ನೀಡಿದ್ದ ಗಡುವ ಮುಗಿದಿದೆ.
ಈ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ 11ಗಂಟೆಗೆ ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಆಟೋ ಚಾಲಕರು ಪ್ಲಾನ್ ಮಾಡಲಾಗಿದೆ. ಮೂರು ದಿನಗಳ ಕಾಲ ಆಟೋ ಚಾಲಕರು ಕಪ್ಪು ಪಟ್ಟಿ ಕಟ್ಟಿಕೊಂಡು ಆಕ್ರೋಶ ವ್ಯಕ್ತಪಡಿಸಿದ್ದರು. ಆದರೂ ಸರ್ಕಾರ ಮಾತ್ರ ಈ ಕುರಿತು ಮಾತಾಡಿಲ್ಲ. ಈ ಕಾರಣ ಬೆಂಗಳೂರಿನ 21ಆಟೋ ಚಾಲಕರ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿದೆ. ಒಟ್ಟೂ 2 ಲಕ್ಷದ 10 ಸಾವಿರ ಆಟೋಗಳ ಸಂಚಾರ ನಾಳೆ ಬಂದ್ ಆಗುತ್ತೆ ಎಂದು ಸಂಘದ ಮುಖಂಡರು ಹೇಳಿದ್ದಾರೆ.