ಬೆಂಗಳೂರು. ಮಾ. 18. ಬೆಂಗಳೂರಿನ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವರಾದ ಸದಾನಂದಗೌಡ ಅವರು ತಮ್ಮ 70 ನೇ ವರ್ಷದ ಹುಟ್ಟು ಹಬ್ಬ ಆಚರಣೆಯ ಸಂದರ್ಭದಲ್ಲಿ, ಅಬಕಾರಿ ಸಚಿವರಾದ ಕೆ.ಗೋಪಾಲಯ್ಯನವರು ಶುಭಾಶಯ ಕೋರಿದರು.ಇದೇ ವೇಳೆ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ 20 ಮಂದಿ ಆದಿಜಾಂಬವ ಫಲಾನುಭವಿಗಳಿಗೆ ಎಲೆಕ್ಟ್ರಿಕಲ್ ಬೈಕ್ ಹಾಗೂ ಹೊಲಿಗೆ ಯಂತ್ರಗಳನ್ನು ವಿತರಣೆ ಮಾಡಿದರು.
ಇದೇ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ, ಸಚಿವರುಗಳಾದ ಎಸ್ ಟಿ ಸೋಮಶೇಖರ್, ಡಾ. ಸಿ.ಎನ್.ಅಶ್ವಥ್ ನಾರಾಯಣ್, ಶಾಸಕ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಮಾಜಿ ಉಪಮೇಯರ್ ಎಸ್ ಹರೀಶ್, ಬಿಜೆಪಿ ಉತ್ತರ ಘಟಕದ ಅಧ್ಯಕ್ಷ ನಾರಾಯಣಗೌಡ, ಅವಿನ್ ಆರಾಧ್ಯ, ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.