ಧಾರವಾಡ: ಅಂಜುಮನ್ ಸಂಸ್ಥೆ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ಅವರ ಮೇಲೆ ಹಲ್ಲೆಗೆ ಯತ್ನ ನಡೆದಿದೆ. 10ಕ್ಕೂ ಹೆಚ್ಚು ಜನ ಅಪರಿಚಿತರು ತಮಟಗಾರ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಯುವಕರು ತಮಟಗಾರ ಅವರ ಮನೆಯವರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ತಮಟಗಾರ ಅವರು ಮನೆಯಲ್ಲಿರದೆ, ಬೆಂಗಳೂರಿನಲ್ಲಿ ಇದ್ದಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ.
ಇಸ್ಮಾಯಿಲ್ ಅವರ ಮೇಲೆ ಲಂಗೋಟಿ ಜಮಾದಾರ್ ಗಲ್ಲಿ, ಅಂಜುಮನ್ ಹಾಸ್ಟೆಲ್ ಬಳಿ ಹಲ್ಲೆ ನಡೆಸಲು ಈ ಯುವಕರು ಗುಂಪು ತಯಾರಾಗಿತ್ತು. ಇಸ್ಮಾಯಿಲ್ ಅವರ ಊರಲ್ಲಿ ಇಲ್ಲದೇ ಹೋಗಿದ್ದರಿಂದ ಆತಂಕಗೊಂಡಿರುವ ಅವರ ಮನೆಯವರು ಧಾರವಾಡದ ಶಹರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತಮಟಗಾರ ಅವರ ಕುಟುಂಬ ತಮಗೆ ಜೀವ ಭಯವಿದೆ. ರಕ್ಷಣೆ ನೀಡಬೇಕು ಎಂದು ಹಿಂದೆಯೇ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದ್ದರು.