ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಇಂದು ಹಿಂದೂ ಸಂಪ್ರದಾಯದಂತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಂದ ಹಾಗೆ ತರುಣ್ ಸುಧೀರ್ ಹಾಗೂ ಸೋನಲ್ ಅವರನ್ನು ಜೋಡಿ ಮಾಡಿದ್ದ ದರ್ಶನ್. ಆದರೆ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ದರ್ಶನ್ ಜೈಲು ಸೇರಿದ್ದಾರೆ. ಮದುವೆಗೆ ದರ್ಶನ್ ಬರ್ತಾರೆ ಅನ್ನೋ ಮಾತು ಸುಳ್ಳಾಯಿತು ಹಾಗಾಗಿ ಅವರ ಅನುಪಸ್ಥಿತಿ ಬೇಸರ ತರಿಸಿದೆ ಎಂದು ತರುಣ್ ಸುಧೀರ್ ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ತರುಣ್ ಸುಧೀರ್, `ಹೊಸ ಜೀವನ ಹೊಸ ಹುರುಪಿದೆ. ಇಷ್ಟು ದಿನ ಕಾದಿದ್ದಕ್ಕೂ ಬೇಸ್ಟ್ ಕೊಟ್ಟಿದಾರೆ ದೇವ್ರು. ತುಂಬಾ ಜನ ಬಂದು ವಿಶ್ ಮಾಡಿದ್ರು ಎಲ್ಲರೂ ತಮ್ಮನ ಥರ ಕುಟುಂಬದ ಥರ ಬಂದು ಹಾರೈಸಿದ್ರು ಎಂದಿದ್ದಾರೆ.
ದರ್ಶನ್ ಅನುಪಸ್ಥಿತಿ ಬಗ್ಗೆಯೂ ಮಾತನಾಡಿದ ತರುಣ್, `ಲಗ್ನ ಪತ್ರಿಕೆ ಬರೆಸುವ ಮುಂಚೆ ಡೇಟ್ ಕನ್ಪರ್ಮ್ ಆಗಿತ್ತು. ಡೇಟ್ ಚೇಂಜ್ ಮಾಡ್ಬೇಡ ಮದ್ವೆ ಮಾಡ್ಕೊ ಅಂದ್ರು ದರ್ಶನ್. ಆಗಸ್ಟ್ 11 ಡೇಟ್ ಕೊಟ್ಟಿದ್ವಿ. ಅವರು ಹೇಳಿದಂತೆ ಮದುವೆ ಆಗ್ತಿದ್ದೇವೆ. ದರ್ಶನ್ ಅವ್ರ ಅನುಪಸ್ಥಿತಿ ಬೇಸರ ಅನ್ನಿಸ್ತಿದೆ’ ಎಂದು ದರ್ಶನ್ ಬಗ್ಗೆ ಮಾತಾಡ್ತಾ ಭಾವುಕರಾದರು.
ನಿರ್ದೇಶಕ ತರುಣ್ ಸುಧೀರ್ ಮತ್ತು ನಟಿ ಸೋನಲ್ ಮದುವೆ ಇಂದು ಬೆಳಗ್ಗೆ 10.50ಕ್ಕೆ ಬೆಂಗಳೂರಿನ ಪೂರ್ಣಿಮಾ ಪಾಲೇಸ್ ನಲ್ಲಿ ನಡೆಯಿತು. ಚಿತ್ರರಂಗದ ಅನೇಕ ಗಣ್ಯರ ಮತ್ತು ಕುಟುಂಬದ ಸಮ್ಮುಖದಲ್ಲಿ ಈ ತರುಣ್, ಸೋನಲ್ ಹೊಸ ಜೀವನಕ್ಕೆ ಕಾಲಿಟಿದ್ದಾರೆ.