ಸ್ಯಾಂಡಲ್ ವುಡ್ ನ ಮುದ್ದಾದ ಜೋಡಿಗಳಲ್ಲಿ ಒಂದು ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್. ಯಶ್ ಹಾಗೂ ರಾಧಿಕಾ ಗೆ ಇಂದು (ಆ.12) ಎಂಗೇಜ್ಮೆಂಟ್ ಸಂಭ್ರಮವಾಗಿದ್ದು, ಪತಿ ಯಶ್ ಬಗ್ಗೆ ರಾಧಿಕಾ ವಿಶೇಷ ಪೋಸ್ಟ್ ಮೂಲಕ ಶುಭ ಹಾರೈಸಿದ್ದಾರೆ. 100 ಜನ್ಮದಲ್ಲೂ ನಿಮ್ಮನ್ನೇ ಆಯ್ಕೆ ಮಾಡಿಕೊಳ್ಳುತ್ತೇನೆ ಎಂದು ಯಶ್ ಕುರಿತು ನಟಿ ಬರೆದುಕೊಂಡಿದ್ದಾರೆ.
8 ವರ್ಷಗಳ ಹಿಂದೆ ಈ ದಿನ ನಾವು ನಿಶ್ಚಿತಾರ್ಥ ಮಾಡಿಕೊಂಡಾಗ ನಾನು ನೂರು ಜನ್ಮದಲ್ಲೂ ನಿಮ್ಮನ್ನು ಆಯ್ಕೆ ಮಾಡಿಕೊಳ್ಳುತ್ತೇನೆ ಎಂದು ನನಗೆ ಮೊದಲೇ ತಿಳಿದಿತ್ತು ಎಂದು ನಟಿ ಬರೆದುಕೊಂಡಿದ್ದಾರೆ. 2016ರ ವೇಳೆ, ಆ.12ರಂದು ತೆಗೆದ ಎಂಗೇಜ್ಮೆಂಟ್ ಸಂಭ್ರಮದ ಫೋಟೋಗಳನ್ನು ರಾಧಿಕಾ ಪಂಡಿತ್ ಹಂಚಿಕೊಂಡಿದ್ದಾರೆ.
ಧಾರವಾಹಿ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಯಶ್ ಹಾಗೂ ರಾಧಿಕಾ ಪಂಡಿತ್ ಹಲವು ವರ್ಷಗಳ ಕಾಲ ಪ್ರೀತಿಸಿ 2016ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇವರ ದಾಂಪತ್ಯಕ್ಕೆ ಇಬ್ಬರೂ ಮುದ್ದಾದ ಮಕ್ಕಳು ಸಾಕ್ಷಿಯಾಗಿದ್ದಾರೆ. ಇನ್ನೂ ಮಕ್ಕಳ ಪಾಲನೆಯಲ್ಲಿ ಬ್ಯುಸಿಯಾದ ರಾಧಿಕಾ, ಬಣ್ಣದ ಲೋಕದಿಂದ ಅಂತರ ಕಾಯ್ದುಕೊಂಡರು.