ಬೆಳಗಾವಿ: ಕಲುಷಿತ ನೀರು ಸೇವನೆಯಿಂದ ವಾಂತಿ ಭೇದಿ ಕಾಣಿಸಿಕೊಂಡಿದ್ದು, ಒಂದೇ ದಿನ 41 ಮಂದಿಗೆ ವಾಂತಿ-ಭೇದಿಯಾದ ತೀವ್ರ ಅಸ್ವಸ್ಥರಾದ ಮೂವರನ್ನ ಬೆಳಗಾವಿ ಜಿಲ್ಲಾಸ್ಪತ್ರೆಗೆ ಮೂವರನ್ನು ಬೈಲಹೊಂಗಲ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿತ್ರಾಣಗೊಂಡಿರುವ ಈರವ್ವ ಗಾಳಿಮಠ (63) ಅವರನ್ನು ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ಸೇರಿಸಲಾಗಿದೆ. ಇನ್ನಿಬ್ಬರು ಒಳರೋಗಿಗಳಾಗಿ ದಾಖಲಾಗಿದ್ದಾರೆ. ಉಳಿದವರು ಚಚಡಿ ಹಾಗೂ ಇಂಚಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಲುಷಿತ ನೀರು ಸೇವನೆಯಿಂದ ವಾಂತಿ ಭೇದಿ ಕಾಣಿಸಿಕೊಂಡಿದೆ. ಪ್ರಾಣಾಪಾಯ ಆಗಿಲ್ಲ. ನಿತ್ರಾಣಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿಕೊಂಡು ಚಿಕಿತ್ಸೆ ಮುಂದುವರಿಸಲಾಗಿದೆ. ಗ್ರಾಮದಲ್ಲಿ ನಾಲ್ವರು ವೈದ್ಯರು ಹಾಗೂ ಹಲವು ವೈದ್ಯಕೀಯ ಸಿಬ್ಬಂದಿ ಸ್ಥಳದಲ್ಲೇ ಇದ್ದಾರೆ. ನೀರನ್ನು ಕುದಿಸಿ 90% ಕುಡಿಯುವಂತೆ ಜಾಗೃತಿ ವಹಿಸಲಾಗಿದೆ.