ಯುವಕನೊಬ್ಬನ ಕೊಲೆ ಮಾಡಿ ಬಸ್ ನಿಲ್ದಾಣದಲ್ಲಿ ಶವ ಎಸೆದು ಹೋಗಿರುವ ಘಟನೆಯೊಂದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪುರ ಗ್ರಾಮದಲ್ಲಿ ನಡೆದಿದೆ. ಗಡಿ ತಾಲೂಕಿನಲ್ಲಿ ಕಳೆದ ಎರಡು ಮೂರು ತಿಂಗಳ ಅವಧಿಯಲ್ಲಿ ನಾಲ್ಕು ಕೊಲೆಗಳಾಗಿದ್ದು ಸದ್ಯ ತಾಲೂಕಿನ ಜನರು ಭಯಭೀತರಾಗಿದ್ದಾರೆ.
ಅಥಣಿ ತಾಲೂಕಿನ ಅನಂತಪುರ ಗ್ರಾಮದ ಹೊರವಲಯದ ಚೆನ್ನಮ್ಮ ವೃತ್ತದಲ್ಲಿರುವ ಬಸ್ ನಿಲ್ದಾಣದಲ್ಲಿ ಕೊಲೆ ಮಾಡಿರುವ ಸ್ಥಿತಿಯಲ್ಲಿ ಯುವಕನ ವ್ಯಕ್ತಿಯ ಶವ ಪತ್ತೆಯಾಗಿದ್ದು ಯುವಕನ್ನ ಮದಭಾವಿ ಗ್ರಾಮದ ಅಪ್ಪಾಸಾಬ ಸಿದ್ದಪ್ಪ ಕಾಂಬಳೆ(37) ಎಂದು ಗುರುತಿಸಿಲಾಗಿದೆ.
ಕೊಲೆಗೆ ನಿಖರವಾದ ಕಾರಣ ತಿಳಿದು ಬರಬೇಕಿದ್ದು ಅಥಣಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.