ಮುಂಬೈ: 16ನೇ ಐಪಿಎಲ್ (IPL 2023) ಆವೃತ್ತಿ ಆರಂಭಕ್ಕೆ ಕೆಲವೇ ದಿನಗಳು ಬಾಕಿಯಿದೆ. ದೇಶದ ವಿವಿಧೆಡೆ 12 ಕ್ರೀಡಾಂಗಣಗಳಲ್ಲಿ ಒಟ್ಟು 70 ಲೀಗ್ ಪಂದ್ಯಗಳು ನಡೆಯಲಿವೆ.
ಕ್ರಿಕೆಟ್ ಇತಿಹಾಸದಲ್ಲಿ ದಾಖಲೆ ಬರೆದಿರುವ ದಿಗ್ಗಜರು ಈ ಐಪಿಎಲ್ನೊಂದಿಗೆ ವಿದಾಯ ಹೇಳುವ ಸಾಧ್ಯತೆಗಳೂ ಇವೆ.
ಈ ನಡುವೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಎಸ್. ಶ್ರೀಶಾಂತ್ (S. Sreesanth) ಖಾಸಗಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ (CSK) 2023ರ ಐಪಿಎಲ್ ಟ್ರೋಫಿ ಗೆಲ್ಲುತ್ತೆ ಅನ್ನಿಸಲ್ಲ ಎಂದು ಭವಿಷ್ಯ ನುಡಿದಿದ್ದಾರೆ.
ಹೊಸ ತಂಡಗಳು ಟ್ರೋಫಿ ಗೆದ್ದರೆ ಖುಷಿಯಾಗುತ್ತೆ. ಅದರಲ್ಲೂ ಆರ್ಸಿಬಿ (RCB) ತಂಡ 2023ರ ಟ್ರೋಫಿ ಗೆದ್ದರೆ ನಾನು ತುಂಬಾನೇ ಖುಷಿಪಡುತ್ತೇನೆ. ಏಕೆಂದರೆ ಭಾರತೀಯ ಕ್ರಿಕೆಟ್ ಜಗತ್ತಿಗೆ ಆರ್ಸಿಬಿ ಮಾಜಿ ನಾಯಕ ವಿರಾಟ್ಕೊಹ್ಲಿ (Virat Kohli) ಸಾಕಷ್ಟು ಕೊಡುಗೆ ನೀಡಿದ್ದಾರೆ. ಆರ್ಸಿಬಿ ಈವರೆಗೆ ಮೂರು ಬಾರಿ ಐಪಿಎಲ್ ಫೈನಲ್ ಪ್ರವೇಶಿಸಿದೆ. ಆದರೆ ಒಂದು ಬಾರಿಯೂ ಕಪ್ ಗೆದ್ದಿಲ್ಲ. ಈ ಬಾರಿ ಕಪ್ ಗೆದ್ದರೆ ಖುಷಿಪಡುತ್ತೇನೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಮುಂಬೈ ಇಂಡಿಯನ್ಸ್ (Mumbai Indians) 5 ಬಾರಿ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ 2021ರ ಆವೃತ್ತಿ ಸೇರಿ 4 ಬಾರಿ ಚಾಂಪಿಯನ್ ಆಗಿದೆ. ಕೋಲ್ಕತ್ತಾ ನೈಟ್ರೈಡರ್ಸ್ 2 ಬಾರಿ ಪ್ರಶಸ್ತಿ ಬಾಚಿಕೊಂಡಿದ್ದು, 3ನೇ ಸ್ಥಾನದಲ್ಲಿದೆ. 2022ರ ಚೊಚ್ಚಲ ಆವೃತ್ತಿಯಲ್ಲೇ ಚಾಂಪಿಯನ್ ಆಗಿರುವ ಗುಜರಾತ್ ಟೈಟಾನ್ಸ್ (Gujarat Titans) ತಂಡ ಮತ್ತೊಮ್ಮೆ ಟ್ರೋಫಿ ಗೆಲ್ಲುವ ಉತ್ಸಾಹದಲ್ಲಿದೆ.