ಮೈಸೂರು: ಚಾಮುಂಡಿ ಬೆಟ್ಟ ತಮ್ಮ ಆಸ್ತಿ ಎಂದು ಮೈಸೂರು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಚಾಮುಂಡಿ ಬೆಟ್ಟ ಈಗ ಹೇಗಿದೆಯೋ ಮುಂದೆಯೂ ಹಾಗೆಯೇ ಇರಲಿ. ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆಗೆ ಕೋರ್ಟ್ ತಡೆಯಾಜ್ಞೆ ನೀಡಿದೆ. ಪ್ರಾಧಿಕಾರದ ರಚನೆ ಅಗತ್ಯವಿಲ್ಲ.
ದೇವಸ್ಥಾನದ ಜೊತೆ ಯಾವ ಸಂಸ್ಥಾನದ ಸಂಬಂಧ ಇದೆಯೋ ಆ ಸಂಸ್ಥಾನಕ್ಕೆ ದೇವಸ್ಥಾನ ಸೇರಬೇಕು ಎಂದು ಪರೋಕ್ಷವಾಗಿ ಚಾಮುಂಡಿ ಬೆಟ್ಟ ತಮ್ಮ ಆಸ್ತಿ ಎಂದು ಹೇಳಿದರು.
ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ಅಮೆರಿಕ ವೀಸಾ ನಿರಾಕರಣೆ ಮಾಡಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಈಗಾಗಲೇ ಅರುಣ್ ಜೊತೆ ಮಾತನಾಡಿದ್ದೇನೆ. ಯಾವ ಕಾರಣಕ್ಕೆ ವೀಸಾ ತಿರಸ್ಕೃತವಾಗಿದೆ ಎನ್ನುವುದು ಗೊತ್ತಿಲ್ಲ. ಈ ಬಗ್ಗೆ ಮಾಹಿತಿ ಪಡೆದು ಕೇಂದ್ರ ಸಚಿವರ ಜೊತೆಯೂ ಮಾತನಾಡುತ್ತೇನೆ ಎಂದಿದ್ದಾರೆ.