ಬಳ್ಳಾರಿ:-:– ತುಂಗಭದ್ರಾ ಡ್ಯಾಂ ಗೇಟ್ ಕಾರ್ಯ ಯಶಸ್ವಿಯಾದರೆ ಪ್ರತಿ ಕಾರ್ಮಿಕನಿಗೆ 50 ಸಾವಿರ ಕೊಡುವುದಾಗಿ ವಸತಿ ಸಚಿವ ಜಮೀರ್ ಘೋಷಣೆ ಮಾಡಿದ್ದಾರೆ.
ತುಂಗಭದ್ರಾ ಜಲಾಶಯ ಸ್ಟಾಪ್ಲಾಗ್ ಗೇಟ್ ಅಳವಡಿಸುವ ಜಾಗಕ್ಕೆ ನಿನ್ನೆ ವಿಜಯನಗರ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಭೇಟಿ ನೀಡಿ ಕೆಲಸಗಾರರ ಜೊತೆ ಮಾತನಾಡಿ ಧೈರ್ಯ ತುಂಬಿದ್ದಾರೆ.
ಧೈರ್ಯ ಕಳೆದುಕೊಳ್ಳದೇ ಕೆಲಸ ಮಾಡಿ. ನಾಳೆ ಗೇಟ್ ಕೂಡಿಸಿ ಕಾರ್ಯ ಯಶಸ್ವಿ ಮಾಡಿ. ನನ್ನ ಕಡೆಯಿಂದ ಪ್ರತಿ ಕಾರ್ಮಿಕನಿಗೆ 50 ಸಾವಿರ ರೂ. ಕೊಡುತ್ತೇನೆ. ಧೈರ್ಯವಾಗಿ ಕೆಲಸ ಮಾಡಿ ಎಂದು ಹೇಳಿದರು.
ಸ್ಟಾಪ್ ಲಾಗ್ ಗೇಟ್ ಕೂರಿಸಲು ಕನ್ನಯ್ಯ ಮತ್ತು ತಂಡದ ಸದಸ್ಯರು ಇಂದು ಹರಸಾಹಸ ಪಟ್ಟಿದ್ದಾರೆ. ಸಚಿವ ಜಮೀರ್ ಅಹ್ಮದ್ 50 ಸಾವಿರ ರೂ. ಕೊಡುತ್ತೇನೆ ಎಂದಿದ್ದಕ್ಕೆ ಕಾರ್ಮಿಕರು ಸಂತಸಪಟ್ಟಿದ್ದಾರೆ.
ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿ ಐದು ದಿನಗಳಾಗಿದೆ. ಅದರ ಜಾಗದಲ್ಲಿ ಇಂದು ತಾತ್ಕಾಲಿಕ ಗೇಟ್ ಕೂರಿಸುವ ಪ್ರಯತ್ನ ಫಲ ಕೊಡಲಿಲ್ಲ. ಗೇಟ್ ಎಲಿಮೆಂಟ್ನಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.