ಹುಬ್ಬಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ಹುಬ್ಬಳ್ಳಿ ತಾಲೂಕಿನ ಹುಬ್ಬಳ್ಳಿ ವಲಯದ ಕೌಲಪೇಟೆಯಲ್ಲಿನ ಪರಮ ಪೂಜ್ಯ ಡಾ,ಡಿ ವೀರೇಂದ್ರ ಹೆಗ್ಗಡೆಯವರ ಮುಂದಾಳತ್ವದಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸಮುದಾಯ ವಿಭಾಗದಿಂದ ಒಂದು ಲಕ್ಷ ರೂಪಾಯಿ ಮೊತ್ತದ ಡಿ,ಡಿ ಯನ್ನು ಮಂಜೂರು ಮಾಡಿದ್ದು,
ಧಾರವಾಡ ಜಿಲ್ಲೆಯ ಜನ ಜಾಗೃತಿಯ ವೇದಿಕೆ ಜಿಲ್ಲಾ ಅಧ್ಯಕ್ಷರಾದ ಸಂತೋಷ್ ಆರ್ ಶೆಟ್ಟಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿಯವರಾದ ಶ್ರೀಯುತ ಲಿಲಾಮೂರ್ತಿಯವರು ಶ್ರೀ ದುರ್ಗಾದೇವಿ ದೇವಸ್ಥಾನ ಕಮಿಟಿಯವರಿಗೆ ಡಿ ಡಿ,ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕರಾದ ಓಂಕೇಶ್ ಸೇವಾ ಪ್ರತಿನಿಧಿಗಳಾದ ಶಿಲ್ಪಾ ರವರು ಹಾಗೂ ದೇವಸ್ಥಾನ ಕಮಿಟಿಯ ಎಲ್ಲಾ ಪದಾಧಿಕಾರಿಗಳು ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು