ಉಡುಪಿ:- ಕಾರಿನಲ್ಲಿ ಮಲಗೋ ಮುನ್ನ ಹುಷಾರಾಗಿರಿ. ಎಲ್ಲ ಗ್ಲಾಸ್ಗಳನ್ನು ಮುಚ್ಚಿಕೊಂಡು ಮಲಗಿದ್ದ ಚಾಲಕರೊಬ್ಬರು ಉಸಿರು ಗಟ್ಟಿ ಚಾಲಕರೊಬ್ಬರು ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ಜರುಗಿದೆ.
37 ವರ್ಷದ ಆನಂದ ಮೃತಪಟ್ಟವರು ಎನ್ನಲಾಗಿದೆ. ಇವರು ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆ ಕಾರಿನಲ್ಲಿ ಕರೆದುಕೊಂಡು ಬಂದಿದ್ದರು. ರೋಗಿಯನ್ನು ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲು ಮಾಡಲಾಗಿತ್ತು. ಮಣಿಪಾಲದಲ್ಲಿ ಉಳಿದುಕೊಳ್ಳಲು ಯಾವುದೇ ರೂಮ್ ಸಿಗದ ಕಾರಣ ಮಣಿಪಾಲ ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ಕಾರು ಪಾರ್ಕ್ ಮಾಡಿ ಒಳಗೆ ಮಲಗಿದ್ದರು.
ಕಾರಿನ ಎಲ್ಲ ಗ್ಲಾಸುಗಳನ್ನು ಏರಿಸಿಕೊಂಡು ಬಂದ್ ಮಾಡಿ ಮಲಗಿದ ಪರಿಣಾಮ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.