ಬೆಂಗಳೂರು: ಮುಡಾ ಅಕ್ರಮ ಕೇಸ್ಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರಿಂದ ಅನುಮತಿ ದೊರೆತಿದೆ. ಅಬ್ರಾಹಂ ಎಂಬವರು ನೀಡಿದ್ದ ಖಾಸಗಿ ದೂರಿನ ಆಧಾರದಲ್ಲಿ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.
ಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿ ನೀಡಿರುವ ಹಿನ್ನೆಲೆ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಪ್ರಾಸಿಕ್ಯೂಷನ್ ಆರಂಭವಾಗಲಿದೆ. ಸಿಎಂ ತನಿಖೆ ಅಥವಾ ಕೋರ್ಟ್ ವಿಚಾರಣೆ ಎದುರಿಸಬೇಕಾಗುವುದು. ದೂರುದಾರರಾದ ವಕೀಲ ಟಿ.ಜೆ. ಅಬ್ರಹಾಂ, ಸಾಮಾಜಿಕ ಕಾರ್ಯಕರ್ತರಾದ ಸ್ನೇಹಮಯಿ ಕೃಷ್ಣ ಮತ್ತು ಪ್ರದೀಪ್ ನೀಡಿರುವ ಈ ಖಾಸಗಿ ದೂರಿಗೆ ರಾಜ್ಯಪಾಲರ ಪೂರ್ವಾನುಮತಿಯ ಬಲ ಸಿಗಲಿದೆ.
ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಅನುಮತಿಯ ವಿಚಾರವೂ ಪ್ರಸ್ತಾಪವಾಗಿತ್ತು. ಅನುಮತಿ ನೀಡಿರುವುದರಿಂದ ಕೋರ್ಟ್ ಆದೇಶ ಮಹತ್ವ ಪಡೆಯಲಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುಂದೆ 3 ಸಾಧ್ಯತೆಗಳಿವೆ. ಮೊದಲನೆಯದು ಮೇಲ್ನೋಟಕ್ಕೆ ಆರೋಪ ಕಂಡುಬಂದರೆ ತನಿಖೆಗೆ ಆದೇಶಿಸಬಹುದು. ಎರಡನೆಯದು ತಾವೇ ಪರಿಜ್ಞಾನಕ್ಕೆ ಪಡೆದು ಸಿಎಂಗೆ ಸಮನ್ಸ್ ಜಾರಿಗೊಳಿಸಬಹುದು.