ಬೆಂಗಳೂರು: ತೈವಾನ್ ಮೂಲದ ಆಪಲ್ ಫೋನ್ ತಯಾರಿಸುವ ಫಾಕ್ಸ್ಕಾನ್ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಅಧ್ಯಕ್ಷ ಯಂಗ್ ಲಿಯು ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯಚರ್ಚೆ ನಡೆಸಿದರು.
ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ ಭೋಜನ ಕೂಟದ ವೇಳೆ ಫಾಕ್ಸ್ಕಾನ್ ಕಂಪನಿಗೆ ರಾಜ್ಯದಲ್ಲಿ ಕಾರ್ಯನಿರ್ವಹಿಸಲು ಅಗತ್ಯವಾದ ಎಲ್ಲಾ ರೀತಿಯ ಸಹಕಾರ, ನೆರವು ಒದಗಿಸಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ. ಸಾಂಸ್ಕೃತಿಕವಾಗಿ ಉನ್ನತ ಮೌಲ್ಯಗಳನ್ನು ಆಚರಿಸುತ್ತಿರುವ ರಾಜ್ಯದಲ್ಲಿ ಕೈಗಾರಿಕೆಗಳಿಗೆ ಅತ್ಯಗತ್ಯವಾದ ಕಾನೂನು ಮತ್ತು ಸುವ್ಯವಸ್ಥೆಯೂ ಉತ್ತಮವಾಗಿದೆ ಎಂದರು.
ಡಿಸಿಎಂ ಡಿ.ಕೆ.ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್, ಮಾಹಿತಿ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಏಕ್ ರೂಪ್ ಕೌರ್ ಸೇರಿದಂತೆ ಕೈಗಾರಿಕೆ ಮತ್ತು ಐಟಿ ಬಿಟಿ ಇಲಾಖೆಯ ಹಿರಿಯ ಅಧಿಕಾರಿಗಳು ಭೋಜನ ಕೂಟದಲ್ಲಿ ಭಾಗವಹಿಸಿದ್ದರು.