ಬೆಂಗಳೂರು:- ಕರ್ನಾಟಕಕ್ಕೆ ಝಿಕಾ ವೈರಸ್ ಆತಂಕ ಹೆಚ್ಚಾಗಿದ್ದು, 7 ಕೇಸ್ ಪತ್ತೆಯಾಗಿದೆ. ಈ ಮೂಲಕ ಆರೋಗ್ಯ ಇಲಾಖೆ ಫುಲ್ ಅಲರ್ಟ್ ಆಗಿದೆ.
ಅತಿಯಾದ ತಲೆನೋವು, ಕೆಂಪಾದ ಕಣ್ಣು, ಜ್ವರ, ಮೈಯಲ್ಲಿ ಗುಳ್ಳೆ, ದದ್ದುಗಳು ಕಾಣಿಸಿಕೊಳ್ಳೋದು ಝಿಕಾ ವೈರಸ್ ಗುಣ ಲಕ್ಷಣ.
ಇನ್ನು ಬಹುತೇಕ ಝೀಕಾ ಸೋಂಕಿತರಿಗೆ ರೋಗ ಲಕ್ಷಣಗಳು ಕಂಡುಬರುವುದಿಲ್ಲ. ಉಳಿದಂತೆ ರೋಗಲಕ್ಷಣಗಳ ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು, 2-7 ದಿನಗಳವರೆಗೆ ಇರುತ್ತದೆ.
ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಸಮೀಪದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡುವಂತೆ, ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಝಿಕಾ ವೈರಸ್ ದೃಢಪಟ್ಟರೆ, ಕುಟುಂಬದ ಸದಸ್ಯರ ರಕ್ತದ ಮಾದರಿ ಲ್ಯಾಬ್ ಟೆಸ್ಟ್ಗೆ ಒಳಪಡಿಸಬೇಕು.
ಮನೆಯ ಸುತ್ತಮುತ್ತಲಿನ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಜನರನ್ನು ಪರೀಕ್ಷೆಗೊಳಪಡಿಸುವುದು ಕಡ್ಡಾಯ. ಆ ಪ್ರದೇಶದ ಒಂದು ಕಿಲೋಮೀಟರ್ ವ್ಯಾಪ್ತಿಯನ್ನು ಕಂಟೈನ್ವೆಂಟ್ ಜೋನ್ ಎಂದು ಪರಿಗಣಿಸಲಾಗುವುದು. ಝಿಕಾ ವೈರಸ್ಗೆ ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ವೈರಸ್ ತಗುಲದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿದೆ.