ಬೆಂಗಳೂರು: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಸುಳಿವು ನೀಡಿದ್ದಾರೆ. ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ (ಕೆಇಆರ್ಸಿ) ಮಾದರಿಯಲ್ಲೇ ಸಾರಿಗೆ ನಿಗಮಗಳಲ್ಲಿ ಪ್ರಯಾಣ ದರ ಏರಿಕೆ ನಿರ್ಧಾರಗಳನ್ನು ಕೈಗೊಳ್ಳಲು ಪ್ರತ್ಯೇಕ ನಿಯಂತ್ರಣ ಆಯೋಗ (ಕೆಟಿಆರ್ಸಿ) ರಚನೆಗೆ ಸರ್ಕಾರ ಮುಂದಾಗಿದೆ ̤ ಸಾರಿಗೆ ಬಸ್ ದರ ಹೆಚ್ಚಳ ವಿಚಾರಕ್ಕೆ ಬಸ್ ದರ ಹೆಚ್ಚಳದ ಸರ್ಕಾರದ ಚಿಂತನೆಯನ್ನ ಟೀಕಿಸಿ ಟ್ವೀಟ್ ಮಾಡಿದ್ದ ಆರ್ ಅಶೋಕ್
ಆರ್ ಅಶೋಕ್ ಗೆ ಟ್ವೀಟ್ ಮೂಲಕ ತಿರುಗೇಟು ನೀಡಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ 2013ರಲ್ಲಿ ತಾವು ಸಾರಿಗೆ ಸಚಿವರಾಗಿದ್ದಾಗ 10.5% ಬಸ್ ದರ್ ಹೆಚ್ಚಿಸಿದ್ದನ್ನ ಮರೆತರಾ ಎಂದು ಅಶೋಕ್ ಗೆ ರಾಮಲಿಂಗ ರೆಡ್ಡಿ ಪ್ರಶ್ನೆ
2020ರಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ 12%ಹೆಚ್ಚಿಸಿದ್ದನ್ನ ಮರೆತರಾ?ಸಾರಿಗೆ ಸಂಸ್ಥೆಯನ್ನ 5900ಕೋಟಿ ನಷ್ಟದಲ್ಲಿ ಬಿಟ್ಟು ಹೊಗಿದ್ದು ಬಿಜೆಪಿ ಸರ್ಕಾರಸಾರಿಗೆ ಸಂಸ್ಥೆ ಉಳಿದರೇನು ಮುಳಿಗಿದರೇನು ರಾಜಕೀಯವೇ ಮುಖ್ಯ ಎನ್ನುವ ಮನಸ್ಥಿತಿ ಎಂದು ಟೀಕೆ…
2020 ರಲ್ಲಿ ತಮ್ಮದೇ ಪಕ್ಷ ಅಧಿಕಾರದಲ್ಲಿದ್ದಾಗ ಬಸ್ ಪ್ರಯಾಣ ದರ 12% ಹೆಚ್ಚಳ ಮಾಡಿದಾಗ ನೀವು ಕ್ಯಾಬಿನೆಟ್ ಮಂತ್ರಿಯಾಗಿದ್ದರಲ್ಲವೇ?ಆಗ ಯಾಕೆ ವಿರೋಧ ವ್ಯಕ್ತಪಡಿಸಲಿಲ್ಲ. ದಿನಾಂಕ: 15/11/2021 ರಲ್ಲಿ ಎಂ.ಆರ್ ಶ್ರೀನಿವಾಸಮೂರ್ತಿ ಭಾಆಸೇ (ನಿವೃತ್ತ) ರವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಸಮಿತಿಯನ್ನು ತಮ್ಮದೇ ಬಿಜೆಪಿ ಸರ್ಕಾರ ರಚಿಸಿತ್ತು.
ಕಾಲಕಾಲಕ್ಕೆ ಬಸ್ ದರವನ್ನು ಹೆಚ್ಚಿಸಬೇಕು, ಆಗಷ್ಟೇ ಸಾರಿಗೆ ಸಂಸ್ಥೆಗಳು ಉಳಿಯಲು ಸಾಧ್ಯವೆಂದು ಸದರಿ ಸಮಿತಿಯು ವರದಿ ನೀಡಿದ್ದು, ನೀವು ಕ್ಯಾಬೆನೆಟ್ ಮಂತ್ರಿಯಾಗಿದ್ದಾಗ ಯಾಕೆ ಈ ವರದಿಯನ್ನು ತಿರಸ್ಕರಿಸಲಿಲ್ಲ. ತಮ್ಮದೇ ಸರ್ಕಾರ ಅಂಗೀಕಾರ ಮಾಡಿದ ವರದಿಯನ್ನು ಈಗ ಸರಿಯಿಲ್ಲವೆಂದು ಹೇಳಲು ಹೊರಟ್ಟಿದ್ದೀರಾ’ ಎಂದು ರಾಮಲಿಂಗಾ ರೆಡ್ಡಿ ಪ್ರಶ್ನಿಸಿದ್ದಾರೆ.
ಅಶೋಕ್ ರವರೇ ತಾವು ಕೂಡ ಸರ್ಕಾರದ ಭಾಗವಾಗಿ ತೆಗೆದುಕೊಂಡ ಎಲ್ಲಾ ಕ್ರಮಗಳನ್ನು ಇಂದು ಮರೆಮಾಚಿ ಜನರಿಗೆ ತಪ್ಪು ಮಾಹಿತಿ ನೀಡುತ್ತಿರುವುದು ಎಷ್ಟು ಸಮಂಜಸ ಎಂದು ಆತ್ಮಾವಲೋಕನ ಮಾಡಿಕೊಳ್ಳಿ ಎಂದು ರಾಮಲಿಂಗಾ ರೆಡ್ಡಿ ತಿರುಗೇಟು ನೀಡಿದ್ದಾರೆ.