ಹುಬ್ಬಳ್ಳಿ: 24 ವರ್ಷದ ಯುವಕನಿಂದ 15 ವರ್ಷದ ಬಾಲಕನ ಮೇಲೆಯೇ ಅತ್ಯಾಚಾರ ನಡೆದಿರುವ ಘಟನೆ ಹುಬ್ಬಳ್ಳಿಯ ಕಸಬಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಸುಮ್ ಹುಲಮನಿ ಎಂಬಾತನಿಂದ ಕೃತ್ಯ ನಡೆದಿದೆ. ಪೇಂಟಿಂಗ್ ಕೆಲಸ ಮಾಡುತ್ತಿದ್ದ ಮಾಸುಮ್ ಹುಲಮನಿ, ಮೊಬೈಲ್ ಕೊಡಿಸುವುದಾಗಿ ಕರೆದುಕೊಂಡು ಹೋಗಿ ಬಾಲಕನ ಮೇಲೆ ಅತ್ಯಾಚಾರವೆಸಗಿದ್ದಾನೆ.
ಪೊಲೀಸರು ಮಾಸುಮ್ ಹಲುಮನಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹುಬ್ಬಳ್ಳಿಯ ಕಸಬಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.