ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಸಂಕಷ್ಟಗಳ ಮೇಲೆ ಸಂಕಷ್ಟು ಎದುರಾಗುತ್ತಿದೆ. ಜೈಲಿನಲ್ಲಿ ಹಾಯಾಗಿರುವ ದರ್ಶನ್ ಫೋಟೋವೊಂದು ವೈರಲ್ ಆಗುತ್ತಿದ್ದಂತೆ ಜನ ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ. ದರ್ಶನ್ ವಿಚಾರದಲ್ಲಿ ಪರಪ್ಪನ ಅಗ್ರಹಾರ ಜೈಲಿನ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂದು ಮಾತು ಕೇಳಿ ಬರ್ತಿದ್ದು ಪ್ರಕರಣ ಸಂಬಂಧ ಈಗಾಗಲೇ 7 ಮಂದಿ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆ.
ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಗೆ ಸಾಕಷ್ಟು ಸೌಲಭ್ಯಗಳನ್ನು ನೀಡಲಾಗುತ್ತಿದೆ. ಆ ಮೂಲಕ ಕಾನೂನಿನ ಉಲ್ಲಂಘನೆ ಮಾಡಲಾಗುತ್ತಿದೆ ಎಂಬ ಮಾತು ಕೇಳಿ ಬರ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ 3 ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ಈ ಮೂರೂ ಎಫ್ಐಆರ್ಗಳಲ್ಲಿ ನಟ ದರ್ಶನ್ ಹೆಸರು ಪ್ರಸ್ತಾಪ ಆಗಿದ್ದು, ಇದರಿಂದ ದರ್ಶನ್ ಗೆ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ.
ಜೈಲಿನಲ್ಲಿ ದುಡ್ಡು ಇರುವ ವ್ಯಕ್ತಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬುದನ್ನು ಸಾಕ್ಷಿ ಎಂಬಂತೆ ದರ್ಶನ್ ಅವರ ಫೋಟೋ ಮತ್ತು ವಿಡಿಯೋಗಳು ವೈರಲ್ ಆಗಿವೆ. ಇದಕ್ಕೆ ಸಂಬಂಧಿಸಿದಂತೆ ಜೈಲು ಅಧೀಕ್ಷಕರ ದೂರು ಆಧರಿಸಿ ಮೂರು ಎಫ್ಐಆರ್ ದಾಖಲು ಮಾಡಲಾಗಿದೆ. ಕೊಲೆ ಆರೋಪಿಗಳಾದ ದರ್ಶನ್, ವಿಲ್ಸನ್ ಗಾರ್ಡನ್ ನಾಗ, ಕುಳ್ಳ ಸೀನ ದರ್ಶನ್ ಆಪ್ತ ನಾಗರಾಜ್ ವಿರುದ್ಧ ಒಂದು ಎಫ್ಐಆರ್ ಆಗಿದೆ.
ಆರೋಪಿ ದರ್ಶನ್ಗೆ ಸಿಗರೇಟ್ ಕೊಟ್ಟಿದ್ದಕ್ಕೆ ಮತ್ತೊಂದು ಎಫ್ಐಆರ್ ದಾಖಲಾಗಿದೆ. ವಿಡಿಯೋ ಮಾಡಿ ವೈರಲ್ ಮಾಡಿದ್ದಕ್ಕೆ 3ನೇ ಎಫ್ಐಆರ್ ದಾಖಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಟ್ಟು 3 ಪ್ರತ್ಯೇಕ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ. ಮೂರು ಎಫ್ಐಆರ್ಗಳಲ್ಲೂ ಕೂಡ ದರ್ಶನ್ ಆರೋಪಿ ಆಗಿದ್ದಾರೆ. ಇದರಿಂದ ಅವರಿಗೆ ಜಾಮೀನು ಪಡೆಯುವಲ್ಲಿ ಸಂಕಷ್ಟ ಎದುರಾಗಲಿದೆ.
ಜೈಲಿನಲ್ಲಿರುವ ದರ್ಶನ್ ತಮ್ಮ ಪ್ರಭಾವ ಬಳಸಿ ಜೈಲಿನ ನಿಯಮಗಳನ್ನು ಮುರಿದಿದ್ದಾರೆ. ಇದು ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿದೆ. ಜೈಲಿನ ವ್ಯವಸ್ಥೆ ಬಗ್ಗೆ ಎಲ್ಲರಿಗೂ ಅನುಮಾನ ಮೂಡುವ ರೀತಿಯಲ್ಲಿ ನಟನ ಫೋಟೋ ಮತ್ತು ವಿಡಿಯೋ ವೈರಲ್ ಆಗಿದೆ. ಇದೀಗ ದರ್ಶನ್ ಹಾಗೂ ಇತರರನ್ನು ಬೇರೆ ಬೇರೆ ಕಾರಾಗೃಹಗಳಿಗೆ ಶೀಫ್ಟ್ ಮಾಡಿ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದಾರೆ.