ಉದ್ದೇಶ ಪೂರ್ವಕವಾಗಿ ಎರಡು ಧರ್ಮಗಳ ನಡುವೆ ಕೋಮು ವೈಷಮ್ಯ ಸೃಷ್ಟಿಸಿ ಧಾರ್ಮಿಕ ಕಲಹ ಮತ್ತು ದ್ವೇಷ ಹರಡಲು ಯತ್ನಿಸುತ್ತಿದ್ದ ರಾಮಗಿರಿ ಗುರು ನಾರಾಯಣಗಿರಿ ಮಹಾರಾಜರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ವಿಜಯಪುರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಮಹಾರಾಷ್ಟ್ರ ರಾಜ್ಯದ ರಾಮಗಿರಿ ಗುರು ನಾರಾಯಣ ಗಿರಿ ಮಹಾರಾಜ್ ಅವರ ವಿರುದ್ಧ ಘೋಷಣೆ ಕೂಗಿ ಎ ಐ ಎಮ್ ಐಎಮ್ ಸಂಘಟನೆ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದರು. ಅವರು ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿಯನ್ನು ಸಲ್ಲಿಸಿಸಿದರು..