ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆ, ಇಂದು ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ರಾಜಭವನ ಚಲೋಗೆ ಕರೆ ನೀಡಲಾಗಿದೆ.
ಸಿಎಂ ಪರವಾಗಿ ನಡೆಯುತ್ತಿರುವ ಶೋಷಿತ ವರ್ಗಗಳ ಒಕ್ಕೂಟದ ಪ್ರತಿಭಟನೆಗೆ ರಾಜ್ಯದ ಮೂಲೆ ಮೂಲೆಗಳಿಂದ ಜನ ಆಗಮಿಸಲಿದ್ದಾರೆ. ಇಂದು ರೈಲು, ಬಸ್ ಮಾರ್ಗವಾಗಿ ಫ್ರೀಡಂಪಾರ್ಕ್ ತಲುಪಲಿದ್ದಾರೆ.
ಸುಮಾರು 1 ಲಕ್ಷಕ್ಕೂ ಅಧಿಕ ಜನ ಸೇರುವ ಸಾಧ್ಯತೆ ಇರುವುದರಿಂದ ಇಂದು ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಿಕ್ ಜಾಮ್ ಆಗಲಿದೆ. ಪರ್ಯಾಯ ಮಾರ್ಗಗಳನ್ನ ಬಳಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ 1 ಲಕ್ಷಕ್ಕೂ ಅಧಿಕ ಜನ ಆಗಮಿಸುವ ನಿರೀಕ್ಷೆ ಇದೆ. ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್ವರೆಗೆ ಮೊದಲು ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 11.30ಕ್ಕೆ ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿ, ಬಳಿಕ ರಾಜಭವನ ಚಲೋ ನಡೆಸಲಾಗುತ್ತೆ.
ಇನ್ನ, ಸಿಎಂ ಪರವಾಗಿ ನಡೆಯುತ್ತಿರುವ ಈ ಪ್ರತಿಭಟನೆ ಶೋಷಿತ ಸಮುದಾಯಗಳ ಒಕ್ಕೂಟದ ಬ್ಯಾನರ್ ಅಡಿಯಲ್ಲಿ ನಡೆಯುತ್ತಿದೆ. ರಾಜಭವನ ಚಲೋಗೆ ಕಾಂಗ್ರೆಸ್ ಮುಖಂಡರು ಭಾಗವಹಿಸಬೇಕೋ? ಬೇಡವೋ? ಎಂಬ ಗೊಂದಲದಲ್ಲಿ ಕಾಂಗ್ರೆಸ್ ಮುಖಂಡರು ಇದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಂದಲೂ ಯಾವುದೇ ಸೂಚನೆ ಬಂದಿಲ್ಲ. ವೈಯಕ್ತಿಕವಾಗಿ ಯಾರು ಬೇಕಾದರೂ ಪ್ರತಿಭಟನೆಯಲ್ಲಿ ಭಾಗವಹಿಸಬಹುದು ಅಂತ ಅಹಿಂದ ವರ್ಗ ಕರೆ ನೀಡಿದೆ.