ಮುಂಬೈ: ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ರಾಜ್ಕೋಟ್ ಕೋಟೆಯಲ್ಲಿ ಕಳೆದ ವರ್ಷ ಪ್ರಧಾನಿ ಮೋದಿ ಅವರು ಅನಾವರಣಗೊಳಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿದು ಬಿದ್ದಿದೆ. 2023ರ ಡಿಸೆಂಬರ್ 4ರಂದು ಭಾರತೀಯ ನೌಕಾಪಡೆಯ ದಿನಾಚರಣೆ ವೇಳೆ ಪ್ರಧಾನಿ ಮೋದಿ ಈ ಭವ್ಯ ಪ್ರತಿಮೆಯನ್ನು ಮೋದಿ ಅನಾವರಣಗೊಳಿಸಿದ್ದರು.
ಮಾಲ್ವಾನ್ನ ರಾಜ್ಕೋಟ್ ಕೋಟೆಯಲ್ಲಿ ಸೋಮವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಮರಾಠ ರಾಜನ 35 ಅಡಿ ಉದ್ದದ ಪ್ರತಿಮೆ ಕುಸಿದಿದುಬಿದ್ದಿದೆ. ಪೊಲೀಸ್ ಮತ್ತು ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ.
ಈ ಬೆನ್ನಲ್ಲೇ ತಜ್ಞರು ಪ್ರತಿಮೆ ಕುಸಿತಕ್ಕೆ ನಿಖರ ಕಾರಣ ತಿಳಿಸಿದ್ದಾರೆ. ಕಳೆದ ಎರಡ್ಮೂರು ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ, ಬಿರುಗಾಳಿ ಬೀಸುತ್ತಿದೆ. ಇದರಿಂದಾಗಿ ಪ್ರತಿಮೆ ಧ್ವಂಸವಾಗಿದೆ ಎಂದು ಹೇಳಿದ್ದಾರೆ. ಕಳೆದ ವರ್ಷ ಪ್ರಧಾನಿ ಮೋದಿ ಪ್ರತಿಮೆ ಅನಾವರಣಗೊಳಿಸಿದ ಬಳಿಕ ಸ್ಥಳೀಯ ಆಡಳಿತಕ್ಕೆ ನಿರ್ವಹಣೆಯ ಹೊಣೆ ವಹಿಸಲಾಗಿತ್ತು. ಸದ್ಯ ಪ್ರತಿಮೆ ಕುಸಿತಕ್ಕೆ ಮಳೆ ಗಾಳಿಯೇ ಕಾರಣವಾ? ಅಥವಾ ಸ್ಥಳೀಯ ಸಂಸ್ಥೆಗಳ ನಿರ್ಲಕ್ಷ್ಯ ಕಾರಣವಾಯ್ತಾ ಅನ್ನೋ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಮೌಲ್ಯಮಾಪನ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.