ಮೆಗಾಸ್ಟಾರ್ ಚಿರಂಜೀವಿ ಕುಟುಂಬದಲ್ಲಿ ಮತ್ತೊಂದು ಡಿವೋರ್ಸ್ ಸುದ್ದಿ ಕೇಳಿ ಬರುತ್ತಿದೆ. ಚಿರಂಜೀವಿ ಸಹೋದರ ನಟ ನಾಗಬಾಬು ಪುತ್ರಿ ನಿಹಾರಿಕಾ ಬದುಕಿನಲ್ಲಿ ಬಿರುಕು ಉಂಟಾಗಿದೆ ಎಂಬ ಸುದ್ದಿ ಟಾಲಿವುಡ್ ನೆಲದಲ್ಲಿ ಸದ್ದು ಮಾಡುತ್ತಿದೆ.
ಮೆಗಾಸ್ಟಾರ್ ಚಿರಂಜೀವಿ ಪುತ್ರಿ ಶ್ರೀಜಾ ಎರಡನೇ ಮದುವೆಯಲ್ಲಿ ಬಿರುಕು ಉಂಟಾಗಿ ತವರಿಗೆ ಬಂದಿದ್ದಾರೆ. ಈ ಬೆನ್ನಲ್ಲೇ ಮೆಗಾ ಕುಟುಂಬಕ್ಕೆ ಮತ್ತೊಂದು ಶಾಕ್ ಎದುರಾಗಿದೆ.
2020ರಲ್ಲಿ ನಾಗಬಾಬು ಪುತ್ರಿ ನಿಹಾರಿಕಾ ಮತ್ತು ಚೈತನ್ಯ ಗುರುಹಿರಿಯರ ಸಮ್ಮುಖದಲ್ಲಿ ಪ್ರೇಮ ವಿವಾಹವಾಗಿದ್ದರು. ಮೆಗಾಸ್ಟಾರ್ ಫ್ಯಾಮಿಲಿ ಅದ್ದೂರಿಯಾಗಿ ಮಗಳ ಮದುವೆಯನ್ನು ರಾಜಸ್ಥಾನದಲ್ಲಿ ಮಾಡಿದ್ದರು. ಎರಡು ವರ್ಷಗಳಿಂದ ಖುಷಿಯಿಂದ ಜೀವನ ಸಾಗಿಸುತ್ತಿದ್ದ ಜೋಡಿಯ ನಡುವೆ ಬಿರುಕು ಉಂಟಾಗಿದೆ ಎನ್ನಲಾಗುತ್ತಿದೆ.
ಡಿವೋರ್ಸ್ ಸುದ್ದಿಗೆ ಪೂರಕವೆಂಬಂತೆ, ಇಬ್ಬರು ಇನ್ಸ್ಟಾಗ್ರಾಂ ಖಾತೆಯಲ್ಲಿ ಒಬ್ಬರನೊಬ್ಬರು ಅನ್ಫಾಲೋ ಮಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ವರ್ಷದಿಂದ ಆಕ್ಟೀವ್ ಇಲ್ಲದೇ ಇರೋದು ಅನುಮಾನ ಮೂಡಿಸಿದೆ. ಕಳೆದ 3-4 ತಿಂಗಳಿಂದ ಇಬ್ಬರು ಒಟ್ಟಿಗೆ ಇಲ್ಲ ಎಂದು ಹೇಳಲಾಗುತ್ತಿದೆ,