ಬೆಂಗಳೂರು: ಜಿಎಸ್ಟಿ , ಆದಾಯ ತೆರಿಗೆ ತುಂಬುವವರ ಗೃಹಲಕ್ಷ್ಮಿ ಯೋಜನೆ ಅರ್ಜಿಗಳನ್ನು ತಿರಸ್ಕಾರ ಮಾಡಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಮೊದಲಿನಿಂದಲೂ ಜಿಎಸ್ಟಿ, ಆದಾಯ ತೆರಿಗೆ ತುಂಬುವವರಿಗೆ ಬರಲ್ಲ ಅಂತಾ ಹೇಳಿದ್ದೇವೆ. ಆದರೆ ಜಿಎಸ್ಟಿ ಇದ್ದವರೂ ನಮ್ಮ ಪೋರ್ಟಲ್ಗೆ ಅರ್ಜಿ ಹಾಕಿದ್ದರು.
ಅವುಗಳನ್ನ ನಾವು ತಿರಸ್ಕಾರ ಮಾಡಿದ್ದೇವೆ ಎಂದು ಹೇಳಿದರು.
ಮಾಧ್ಯಮಗಳ ಜೊತೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸುಮಾರು ಹದಿನೈದು ಸಾವಿರ ಅರ್ಜಿಗಳು ಬಂದಿದ್ದವು. ಜಿಎಸ್ಟಿ ಇರುವ ಕಾರಣಕ್ಕೆ ತತಕ್ಷಣ ಅರ್ಜಿ ತಿರಸ್ಕಾರ ಮಾಡಿದ್ದೇವೆ. 1ಕೋಟಿ 23ಲಕ್ಷ ಗೃಹಲಕ್ಷ್ಮಿ ಹಣ ಅಂತಾ ಹೇಳಿದ್ದು ಕವರ್ ಮಾಡಿದ್ದೇವೆ. ಇಡೀ ರಾಜ್ಯದಲ್ಲಿ ಶ್ರೀಮಂತರು, ಜಿಎಸ್ಟಿ ಇದ್ದವರು ಸೇರಿ ಒಟ್ಟು 1ಕೋಟಿ 58ಲಕ್ಷ ಕುಟುಂಬಗಳಿವೆ. ಇಂದಿಗೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಬಹುದು.
ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಜಮಾ ಆಗಿದೆ. ಜೂನ್ ತಿಂಗಳದ್ದು ಕೂಡ ಎಂಬತ್ತು ಸಾವಿರ ಜನರಿಗೆ ತಲುಪಿಲ್ಲ. ತಾಂತ್ರಿಕ ದೋಷವನ್ನ ಈಗಾಗಲೇ ಸರಿ ಮಾಡಿದ್ದೇವೆ. ಜುಲೈ ಮತ್ತು ಆಗಷ್ಟ್ ತಿಂಗಳದ್ದು ಕೂಡ ಸಿಎಂ ಜೊತೆಗೆ ನಿನ್ನೆ ಚರ್ಚೆ ಮಾಡಿದ್ದೇನೆ. ಇನ್ನೊಂದು ವಾರದಲ್ಲಿ ಎರಡು ತಿಂಗಳ ಹಣ ಕೂಡ ಜಮಾ ಆಗಲಿದೆ ಎಂದು ಮಾಹಿತಿ ನೀಡಿದರು