ಒಲಿಂಪಿಕ್ ಪದಕ ವಿಜೇತೆ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಅವರಿಗೆ ತೆಲುಗಿನ ಖ್ಯಾತ ನಟ ನಾಗಾರ್ಜುನ್ ಅವರು 73 ಲಕ್ಷ ರೂ ಮೌಲ್ಯದ ಬಿಎಂಡಬ್ಲು ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಯುವ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಸಚಿನ್ ತೆಂಡೂಲ್ಕರ್ ಅವರ ಪ್ರಯತ್ನದಿಂದ ಈ ಕಾರನ್ನು ನೀಡಲಾಗಿದೆ.
ಆಂಧ್ರಪ್ರದೇಶದ ತೆಲಂಗಾಣದಲ್ಲಿ ಹುಟ್ಟಿ ಬೆಳೆದ ಪಿವಿ ಸಿಂಧು. 2011 ರಿಂದ ದೇಶಕ್ಕಾಗಿ ಬ್ಯಾಡ್ಮಿಂಟನ್ ಆಡುತ್ತಿದ್ದಾರೆ. ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಇದುವರೆಗೆ 457 ಗೆಲುವು ಮತ್ತು 201 ಸೋಲುಗಳನ್ನು ಕಂಡಿದ್ದು, ರಿಯೊ ಒಲಿಂಪಿಕ್ಸ್ನಲ್ಲಿ ಬೆಳ್ಳಿ ಪದಕ, ಟೋಕಿಯೊ ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ಗೆದ್ದರು. ಒಲಿಂಪಿಕ್ ಪದಕ ಮಾತ್ರವಲ್ಲದೆ ವಿಶ್ವ ಚಾಂಪಿಯನ್ಶಿಪ್ನಲ್ಲಿ ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಗೆದ್ದು ಬೀಗಿದ್ದಾರೆ.
ಪಿವಿ ಸಿಂಧು ಅವರ ಒಟ್ಟು ಆಸ್ತಿ ಮೌಲ್ಯ ರೂ.59 ಕೋಟಿ ಎಂದು ಅಂದಾಜಿಸಲಾಗಿದೆ. ಇದರಲ್ಲಿ ತೆಲುಗು ನಟ ನಾಗಾರ್ಜುನ ಉಡುಗೊರೆಯಾಗಿ ನೀಡಿದ ರೂ.73 ಲಕ್ಷ ಮೌಲ್ಯದ BMW ಕಾರು ಕೂಡ ಸೇರಿದೆ. ಹೈದರಾಬಾದ್ನ ಅನ್ನಪೂರ್ಣ ಸ್ಟುಡಿಯೋದಲ್ಲಿ ಮುಖ್ಯ ಕೋಚ್ ಪಿ. ಗೋಪಿಚಂದ್ ಸಮ್ಮುಖದಲ್ಲಿ, ನಟ ಅಕ್ಕಿನೇನಿ ನಾಗಾರ್ಜುನ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಅವರಿಗೆ ಹೊಚ್ಚ ಹೊಸ BMW ಕಾರನ್ನು ಉಡುಗೊರೆಯಾಗಿ ನೀಡಿದರು.
ಅಂದ ಹಾಗೆ ನಾಗಾರ್ಜುನ್ ಅವರು ಸಿಂಧು ಅವರಿಗೆ ಕಾರನ್ನು ಉಡುಗೊರೆಯಗಿ ನೀಡಿದ್ದು ಸುಮಾರು 5 ವರ್ಷಗಳ ಹಿಂದೆ. ಈ ಕಾರ್ಯಕ್ರಮದಲ್ಲಿ ತೆಲಂಗಾಣ ಬ್ಯಾಡ್ಮಿಂಟನ್ ಸಂಸ್ಥೆಯ ಉಪಾಧ್ಯಕ್ಷ ವಿ. ಚಾಮುಂಡೇಶ್ವರನಾಥ್ ಭಾಗವಹಿಸಿದ್ದರು. ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ನೇತೃತ್ವದಲ್ಲಿ, ಸಮಾನ ಮನಸ್ಕ ಸ್ನೇಹಿತರು ಒಟ್ಟಾಗಿ ಹಣ ಸಂಗ್ರಹಿಸಿ ಯುವ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ಕಾರುಗಳನ್ನು ಉಡುಗೊರೆಯಾಗಿ ನೀಡುತ್ತಿದ್ದಾರೆ. ಚಾಮುಂಡೇಶ್ವರನಾಥ್ ನೀಡಿದ 22ನೇ ಕಾರು ಇದಾಗಿದೆ.