ಬೆಂಗಳೂರು:- ಕರ್ನಾಟಕದಲ್ಲಿ ಎಚ್1ಎನ್1 ಸೋಂಕು 7 ಪಟ್ಟು ಹೆಚ್ಚಾಗಿದ್ಗು, ಬೆಂಗಳೂರಿನಲ್ಲಿ ಹೆಚ್ಚು ಸೋಂಕು ಪತ್ತೆಯಾಗಿದೆ. ಈ ವರ್ಷ ಜುಲೈ 31 ರವರೆಗೆ ರಾಜ್ಯಾದ್ಯಂತ 855 ಪ್ರಕರಣಗಳು ವರದಿಯಾಗಿದ್ದು, ಬೆಂಗಳೂರಿನಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ.
ಕಳೆದ ವರ್ಷ ಜುಲೈ ವೇಳೆಗೆ ರಾಜ್ಯಾದ್ಯಂತ 118 ಪ್ರಕರಣಗಳು ವರದಿಯಾಗಿದ್ದವು.
ಈ ವರ್ಷ ಎಚ್1ಎನ್1 ಸೋಂಕಿನಿಂದಾಗಿ ಮೈಸೂರಿನಲ್ಲಿ 15 ವರ್ಷದ ಹುಡುಗ ಮತ್ತು ದೊಡ್ಡಬಳ್ಳಾಪುರದಲ್ಲಿ 48 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ವೈರಸ್ ಪರೀಕ್ಷೆ ಮಾಡಿಸಿ ಪಾಟಿಸಿವ್ ಬಂದ ಮೂವರು ಇತರೆ ರೋಗಗಳು ಮತ್ತು ವಯಸ್ಸಿನ ಕಾರಣದಿಂದ ಸಾವನ್ನಪ್ಪಿದ್ದಾರೆ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆರೋಗ್ಯ ಇಲಾಖೆಯು ಎಚ್1ಎನ್1 ಬಗ್ಗೆ ಸಕ್ರಿಯ ಕಣ್ಗಾವಲು ಇಟ್ಟಿಲ್ಲ. ಆದಾಗ್ಯೂ ಹೆಚ್ಚಿನ ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳು ಮತ್ತು ಹೆಚ್ಚಿದ ಟೆಸ್ಟಿಂಗ್ ಪ್ರಕರಣಗಳ ಟ್ರ್ಯಾಕಿಂಗ್ ಮತ್ತು ನಿಯಂತ್ರಣಕ್ಕೆ ಸಹಾಯ ಮಾಡಿದೆ ಎಂದು ಇಂಟಿಗ್ರೇಟೆಡ್ ಡಿಸೀಸ್ ಸರ್ವೈಲೆನ್ಸ್ ಪ್ರೋಗ್ರಾಂನ ಯೋಜನಾ ನಿರ್ದೇಶಕ ಡಾ.ಅನ್ಸಾರ್ ಅಹಮದ್ ತಿಳಿಸಿದ್ದಾರೆ.
ನಾವು ಪ್ರಕರಣಗಳ ಬಗ್ಗೆ ಕೂಲಂಕಷವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇವೆ ಮತ್ತು ನಮ್ಮ ದಾಖಲೀಕರಣ ಪ್ರಕ್ರಿಯೆಯನ್ನು ಸುಧಾರಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರಿನ ವೈದ್ಯರು ಕಳೆದ ಎರಡು ವಾರಗಳಲ್ಲಿ ಎಚ್1ಎನ್1 ಪ್ರಕರಣಗಳು ದ್ವಿಗುಣಗೊಂಡಿರುವುದನ್ನು ಗಮನಿಸಿದ್ದಾರೆ. ಈ ಪ್ರಕರಣಗಳಲ್ಲಿ ರೋಗಿಗಳಲ್ಲಿ ತೀವ್ರತೆ ಹೆಚ್ಚಿತ್ತು ಎಂದೂ ವರದಿ ಉಲ್ಲೇಖಿಸಿದೆ.