ಖ್ಯಾತ ನಟಿ ಮೀನಾ ಕುರಿತಾದ ಸುದ್ದಿಯೊಂದು ಕಳೆದ ಕೆಲ ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಪತಿಯ ಸಾವಿನ ನೋವಿನಿಂದ ಚೇತರಿಸಿಕೊಂಡಿರುವ ನಟಿ ಮೀನಾ ಇದೀಗ 2ನೇ ಮದುವೆ ಆಗಲಿದ್ದಾರೆ ಎನ್ನಲಾಗುತ್ತಿದೆ. ಕಾಲಿವುಡ್ ನಟ, ರಜನಿಕಾಂತ್ ಮಾಜಿ ಅಳಿಯ ಧನುಷ್ ಜೊತೆ ಮೀನಾ ಮದುವೆ ಆಗುತ್ತಿದ್ದಾರೆ ಎನ್ನಲಾಗುತ್ತಿದೆ.
ರಜನಿಕಾಂತ್ ಪುತ್ರಿ ಐಶ್ವರ್ಯಾಗೆ ಧನುಷ್ ಡಿವೋರ್ಸ್ ನೀಡಿದ್ದು ಇದೀಗ ಇಬ್ಬರೂ ತಮ್ಮ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಹೀಗಿರುವಾಗ ಧನುಷ್ ಮತ್ತು ಮೀನಾ ಮದುವೆ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಇಬ್ಬರ ಮದುವೆ ಬಗ್ಗೆ ಸಂದರ್ಶನವೊಂದರಲ್ಲಿ ನಟ ಬೈಲಾನ್ ರಂಗನಾಥನ್ ಮಾಹಿತಿ ಹಂಚಿಕೊಂಡಿದ್ದಾರೆ.
ಧನುಷ್- ಮೀನಾ ಇಬ್ಬರು ಒಂಟಿ ಜೀವನ ನಡೆಸುತ್ತಿದ್ದಾರೆ. ಮುಂಬರುವ ಜುಲೈನಲ್ಲಿ ಇಬ್ಬರೂ ಮದುವೆಯಾಗುತ್ತಾರೆ ಎಂದು ಬೈಲಾನ್ ರಂಗನಾಥನ್ ಹೇಳಿದ್ದಾರೆ. ಈ ಸುದ್ದಿ ಕೇಳ್ತಿದ್ದಂತೆ ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ವಿಚಾರ ಚರ್ಚೆಗೆ ಗ್ರಾಸವಾಗಿದೆ.