ಕಳೆದ ವಾರ ಭಾರತದ ಪ್ರಧಾನಿ ನರೇಂದ್ರ ಮೋದಿ ಜೊತೆ ದೂರವಾಣಿ ಮಾತುಕತೆ ನಡೆಸಿದ್ದ ಅಮೆರಿಕ ಅಧ್ಯಕ್ಷ ಜೋ ಬೈಡನ್, ಬಾಂಗ್ಲಾದೇಶದ ಜನರ ಸುರಕ್ಷತೆ ಹಾಗೂ ಅಲ್ಲಿನ ಪ್ರಜಾಪ್ರಭುತ್ವ ಸಂಸ್ಥೆಗಳ ಬಗ್ಗೆ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು ಎಂದು ಶ್ವೇತಭವನದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಕಿರ್ಬಿ ಹೇಳಿದ್ದಾರೆ.
ಶ್ವೇತ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಕಿರ್ಬಿ ಈ ವಿಷಯ ತಿಳಿಸಿದ್ದಾರೆ.
ಈ ಬಗ್ಗೆ ಆಗಸ್ಟ್ 26ರಂದು ಪ್ರಕಟಣೆ ಬಿಡುಗಡೆ ಮಾಡಿದ್ದ ಶ್ವೇತಭವನ, ಬಾಂಗ್ಲಾದೇಶದ ಬಗ್ಗೆ ಯಾವುದೇ ಉಲ್ಲೇಖ ಮಾಡಿರಲಿಲ್ಲ. ಆದರೆ ಪ್ರಧಾನಿ ಮೋದಿಯವರ ಕಚೇರಿಯ ಎಕ್ಸ್ ಪೋಸ್ಟ್ನಲ್ಲಿ ಬಾಂಗ್ಲಾದೇಶದ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ಹೇಳಲಾಗಿತ್ತು.
‘ಉಭಯ ನಾಯಕರು ಬಾಂಗ್ಲಾದೇಶ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಅಲ್ಲಿನ ಕಾನೂನು ಮತ್ತು ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ಮತ್ತು ಅಲ್ಪಸಂಖ್ಯಾತರ, ವಿಶೇಷವಾಗಿ ಹಿಂದೂಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಾತರಿಪಡಿಸುವ ಬಗ್ಗೆ ಒತ್ತು ನೀಡಿದರು’ ಎಂದು ಪ್ರಧಾನಮಂತ್ರಿ ಕಚೇರಿ ಈ ಹಿಂದೆ ತಿಳಿಸಿತ್ತು.