ಬೆಂಗಳೂರು:- ಶೆಡ್ನಲ್ಲಿ ರೇಣುಕಾಸ್ವಾಮಿ ಕೈ ಮುಗಿದು ಅಂಗಲಾಚುತ್ತಿರುವ ಫೋಟೋ ಎಲ್ಲೆಡೆ ವೈರಲ್ ಆಗಿದ್ದು, ಎಂಥವರಿಗೂ ಕರುಳು ಚುರುಕ್ ಎನ್ನುವಂತೆ ಮಾಡಿದೆ
ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಪಟ್ಟಣಗೆರೆಯಲ್ಲಿರುವ ಶೆಡ್ಗೆ ಕರೆದುಕೊಂಡು ಹೋಗಲಾಗಿತ್ತು.
ಇದೆಲ್ಲ ಪ್ಲ್ಯಾನ್ ಮಾಡಿದ್ದು ದರ್ಶನ್ ಎನ್ನುವ ಆರೋಪ ಇದೆ. ದರ್ಶನ್ ಹಾಗೂ ಗ್ಯಾಂಗ್ ಮೇಲೆ ಈಗ ಕೊಲೆ ಆರೋಪ ಬಂದಿದೆ. ರೇಣುಕಾ ಸ್ವಾಮಿಗೆ ಸಾಕಷ್ಟು ಟಾರ್ಚರ್ ನೀಡಲಾಗಿತ್ತು. ಈ ಟಾರ್ಚ್ನಿಂದಲೇ ಅವರು ಮೃತಪಟ್ಟಿದ್ದರು. ಈಗ ಅವರು ಕೈ ಮುಗಿದು ಅಂಗಲಾಚುತ್ತಿರುವ ಫೋಟೋ ನೋಡಿ ಅನೇಕರಿಗೆ ದುಃಖ ಆಗಿದೆ.
ರೇಣುಕಾ ಸ್ವಾಮಿ ಅವರು ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದರು. ಈ ಕಾರಣಕ್ಕೆ ದರ್ಶನ್ ಸಿಟ್ಟಾಗಿದ್ದರು. ಉಗುರಲ್ಲಿ ಹೋಗೋದಕ್ಕೆ ಕೊಡಲಿ ತೆಗೆದುಕೊಂಡರು ಎಂಬಂತೆ, ದರ್ಶನ್ ಅವರು ಈ ವಿಚಾರವನ್ನು ಕಾನೂನಾತ್ಮಕವಾಗಿಯೂ ಬಗೆಹರಿಸಬಹುದಿತ್ತು. ಆದರೆ, ಅವರು ಆ ರೀತಿ ಮಾಡಿಲ್ಲ. ಇದರಿಂದ ಅವರಿಗೆ ಸಂಕಷ್ಟ ಆಗಿದೆ.