ಬೆಂಗಳೂರು:- ಗಣೇಶ ಹಬ್ಬ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಶನಿವಾರ ರಂದು ಪ್ರಾಣಿವಧೆ ಮತ್ತು ಮಾಂಸ ಮಾರಟವನ್ನು ಬಿಬಿಎಂಪಿ ನಿಷೇಧಿಸಿದೆ. ಈ ಕುರಿತು ಬಿಬಿಎಂಪಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ಶನಿವಾರ ಗಣೇಶ ಚರುರ್ಥಿ ಹಬ್ಬದ ಪ್ರಯುಕ್ತ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರುವಂತಿಲ್ಲ. ಈ ಕುರಿತು ಬಿಬಿಎಂಪಿ ಜಂಟಿ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿ ಕೂಡ ನೀಡಲಾಗಿದೆ.