ಬೆಂಗಳೂರು: ಕೇಂದ್ರ ಸಚಿವೆ ಶಶಿಕಲಾ ಜೊಲ್ಲೆ ಅವರ ಬೆಂಗಳೂರಿನ ಮನೆಯ ಮುಂದೆಯೇ ಕೊಲೆಯ ಯತ್ನ ನಡೆದಿದ್ದು ಸಿಲಿಕಾನ್ ಸಿಟಿ ಮಂದಿ ಬೆಚ್ಚಿಬಿದ್ದಿದ್ದಾರೆ. ಕಿಡಿಗೇಡಿಗಳು ತಮ್ಮ ಸ್ನೇಹಿನ ಮೇಲೆಯೇ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ್ದಾರೆ. ಮೂರ್ನಾಲ್ಕು ಬಾರಿ ಕಾರು ಹತ್ತಿಸಿ ವಿಕೃತಿ ಮೆರೆದಿದ್ದಾರೆ.
ಸದ್ಯ ಗಾಯಾಳು ರೌಡಿಶೀಟರ್ನನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಇಂದು ಮುಂಜಾನೆ 5.30 ರಿಂದ 6 ಗಂಟೆಯ ನಡುವೆ ಈ ಘಟನೆ ನಡೆದಿದೆ. ಹೈಗ್ರೌಂಡ್ ಠಾಣೆಯಲ್ಲಿ ರೌಡಿಶೀಟರ್ ಆಗಿರುವ ಗಗನ್ ಶರ್ಮಾ ಎಂಬಾತನ ಮೇಲೆ ಸುನೀಲ್ ಕುಮಾರ್, ಅರುಣ್, ಕೃಷ್ಣ ಕೃತ್ಯ ಎಸಗಿ ವಿಕೃತಿ ಮೆರೆದಿದ್ದಾರೆ.
ರೌಡಿಶೀಟರ್ ಗಗನ್ ಮತ್ತು ಉಳಿದ ಆರೋಪಿಗಳೆಲ್ಲರೂ ಸ್ನೇಹಿತರು. ಬಿಬಿಎಂಪಿ ಟ್ಯಾಕ್ಸ್ ಕಲೆಕ್ಟರ್ ಆಗಿರುವ ಸುನೀಲ್ ಕುಮಾರ್ ಹಾಗೂ ಗಗನ್ ನಡುವೆ ಆಸ್ತಿ ವಿಚಾರಕ್ಕಾಗಿ ಮನಸ್ತಾಪವಾಗಿತ್ತು. ಹೀಗಾಗಿ ಸುನೀತ್ ಮಾತನಾಡಬೇಕು ಎಂದು ಮಾರ್ಚ್ 20 ರಂದು ರಾತ್ರಿ 10 ಗಂಟೆಗೆ ಗಗನ್ಗೆ ಕಾಲ್ ಮಾಡಿ ಫ್ರೇಜರ್ ಟೌನ್ಗೆ ಕರೆಸಿಕೊಂಡಿದ್ದ. ಬಳಿಕ ಅಲ್ಲಿಂದ ಕಾರಿನಲ್ಲಿ ಕೂರಿಸಿಕೊಂಡು ಸಿಟಿ ರೌಂಡ್ಸ್ ಹೊಡೆದು ಮಾರ್ಚ್ 21 ರ ಬೆಳಗ್ಗೆ ಜಯಮಹಲ್ ರಸ್ತೆ ಬಳಿ ಬಂದು ಕಾರು ನಿಲ್ಲಿಸಿದ್ದ.
ಕೆಎ ೦3 ಎಂಫ್ 3347 ನಂಬರ್ ನ ಅಸ್ಸೆಂಟಟ್ ಕಾರಿನಲ್ಲಿ ನಾಲ್ವರು ಇದ್ದರು. ನಾಲ್ವರು ಕೂಡ ಒಟ್ಟಿಗೆ ಸಿಟಿ ರೌಂಡ್ಸ್ ಹೊಡೆದಿದ್ದರು. ಆದ್ರೆ ಈ ವೇಳೆ ಗಲಾಟೆ ನಡೆದಿದೆ. ಸುನೀಲ್ ಸೇರಿ ಮೂವರು ಗಗನ್ ಮೇಲೆ ಹಲ್ಲೆ ನಡೆಸಿದ್ದಾರೆ. ದೊಣ್ಣೆ, ಕೈ ಯಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನಂತರ ಕೆಳಗೆ ತಳ್ಳಿ ಮೂರ್ನಾಲ್ಕು ಬಾರಿ ಕಾರು ಹತ್ತಿಸಿದ್ದಾರೆ. ಬಳಿಕ ಎಸ್ಕೇಪ್ ಆಗಿದ್ದಾರೆ. ಇದನ್ನು ಕಂಡ ಸ್ಥಳೀಯರು ಜೆಸಿ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಗಾಯಾಳು ಗಗನ್ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.