ಹಾಸನ: ಇಂದು ಎತ್ತಿನಹೊಳೆ ಯೋಜನೆಯ ಮೊದಲ ಹಂತ ಲೋಕಾರ್ಪಣೆಗೊಳ್ಳಲಿದೆ. ಡಿಸಿಎಂ ಡಿಕೆ ಶಿವಕುಮಾರ್ ಈಗಾಗಲೇ ದೊಡ್ಡನಗರ ಗ್ರಾಮ ತಲುಪಿದ್ದು, ಯೋಜನೆ ಲೋಕಾರ್ಪಣೆ ಪೂರ್ವಭಾವಿ ಪೂಜೆಯಲ್ಲಿ ಅಧಿಕಾರಿಗಳ ಜತೆ ಭಾಗಿಯಾಗಿದ್ದಾರೆ. ಟೀಕೆಗಳು ಸಾಯುತ್ತವೆ, ನಮ್ಮ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ ಎಂದು ನಾನು ನಂಬಿದ್ದೇನೆ. ಎತ್ತಿನಹೊಳೆ ಯೋಜನೆ ಬಗ್ಗೆ ಟೀಕೆ ಮಾಡಿದವರಿಗೆ ನೀರು ಹರಿಸಿ ಉತ್ತರ ನೀಡುತ್ತವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸಕಲೇಶಪುರದ ದೊಡ್ಡನಗರದ ಡಿ.ಸಿ- 3 ಪಂಪ್ ಹೌಸ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ,
ರಾಜ್ಯ ಇತಿಹಾಸದಲ್ಲಿ ಈ ಘಳಿಗೆಯಲ್ಲಿ ಒಂದು ವಿಶಿಷ್ಟ ಮೈಲಿಗಲ್ಲು ಸ್ಥಾಪನೆಯಾಗುತ್ತಿದೆ ಎಂದರು. ಆಲಮಟ್ಟಿ ಯೋಜನೆಗೆ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಶಂಕು ಸ್ಥಾಪನೆ ಮಾಡಿದ್ದರು. 2006ರಲ್ಲಿ ಅಬ್ದುಲ್ ಕಲಾಂ ಅವರು ಯೋಜನೆ ಉದ್ಘಾಟನೆ ಮಾಡಿದ್ದರು.
ಆಲಮಟ್ಟಿ ಯೋಜನೆ ಜಾರಿ ನಂತರ ಎತ್ತಿನಹೊಳೆ ಯೋಜನೆಯು ಕರ್ನಾಟಕ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಕುಡಿಯುವ ನೀರಿನ ಯೋಜನೆಯಾಗಿದೆ. 2014 ಮಾರ್ಚ್ 5ರಂದು ಸಿಎಂ ಸಿದ್ದರಾಮಯ್ಯ ಅವರು ಎತ್ತಿನಹೊಳೆ ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದರು. ಈಗ ಅವರ ನೇತೃತ್ವದಲ್ಲಿ ಈ ಯೋಜನೆ ಉದ್ಘಾಟನೆಯಾಗುತ್ತಿದೆ ಎಂದು ಸಙತಸ ವ್ಯಕ್ತಪಡಿಸಿದರು.
ಯೋಜನೆ ಪ್ರಾರಂಭವಾಗಿ ಹತ್ತು ವರ್ಷಗಳು ಕಳೆದಿದ್ದು, ಬೇಕಾದಷ್ಟು ಟೀಕೆ ಟಿಪ್ಪಣಿಗಳು ಕೇಳಿ ಬಂದವು. ಎಲ್ಲವನ್ನೂ ಮೆಟ್ಟಿನಿಂತು ಯೋಜನೆ ಜಾರಿಯಾಗುತ್ತಿದೆ ಎಂದರು. ಈ ಯೋಜನೆಗೆ ಬೇರೆ ಸರಕಾರಗಳು ಪ್ರಯತ್ನಿಸಿವೆ. ನಾನು ಯಾರನ್ನೂ ದೂಷಿಸುವುದಿಲ್ಲ” ಎಂದು ತಿಳಿಸಿದರು.