ಮಂಡ್ಯ :- ಲೋಕಸಭಾ ಚುನಾವಣೆಯಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಿಂದ ನಿರೀಕ್ಷೆಗೂ ಮೀರಿ ಬಹುಮತ ನೀಡಿದ ಪರಿಣಾಮ ಮಾನ್ಯ ಸಂಸದರಾದ ಕುಮಾರಸ್ವಾಮಿ ಅವರು ಪಾಸ್ ಪೋರ್ಟ್ ಸೇವಾ ಕೇಂದ್ರವನ್ನು ಮಂಡ್ಯಗೆ ಸ್ಥಳಾಂತರ ಮಾಡುವ ಮೂಲಕ ಕ್ಷೇತ್ರದ ಜನತೆಗೆ ನೀಡಿದ ಬಹುದೊಡ್ಡ ಬಹುಮಾನ ಎಂದು ಶಾಸಕ ಕೆ.ಎಂ.ಉದಯ್ ಲೇವಡಿ ಮಾಡಿದರು.ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದಿಂದ ಕೊಲ್ಲಿ ವೃತ್ತದವರೆಗೆ ಹಳೇಮೈಸೂರು ರಾಷ್ಟ್ರೀಯ ಹೆದ್ದಾರಿಯ ಮರು ಡಾಂಬರೀಕರಣ ಕಾಮಗಾರಿಗೆ ಶುಕ್ರವಾರ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಲೋಕಸಭಾ ಚುನಾವಣೆಯಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಿಂದ ನಿರೀಕ್ಷೆಗೂ ಮೀರಿ ಬಹುಮತ ನೀಡಿದ ಪರಿಣಾಮ ಮಾನ್ಯ ಸಂಸದರಾದ ಕುಮಾರಸ್ವಾಮಿ ಅವರು ಪಾಸ್ ಪೋರ್ಟ್ ಸೇವಾ ಕೇಂದ್ರವನ್ನು ಮಂಡ್ಯಗೆ ಸ್ಥಳಾಂತರ ಮಾಡುವ ಮೂಲಕ ಕ್ಷೇತ್ರದ ಜನತೆಗೆ ಬಹುದೊಡ್ಡ ಬಹುಮಾನ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕು ಕೇಂದ್ರದಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರ ತೆರೆಯಲು ತುಂಬಾ ಕಷ್ಟದ ಕೆಲಸ ಆದರೆ, ಈಗಿರುವ ಪಾಸ್ ಪೋರ್ಟ್ ಸೇವಾ ಕೇಂದ್ರದಿಂದ ತಾಲೂಕಿನ ಸಾವಿರಾರು ಜನರಿಗೆ ತುಂಬಾ ಅನುಕೂಲವಾಗುತ್ತಿದೆ. ಆದರೆ, ಸಂಸದರಾದ ಕುಮಾರಸ್ವಾಮಿ ಅವರು ಕ್ಷೇತ್ರದ ಜನತೆಗೆ ಮತ್ತಷ್ಟು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿ ಅವರ ಋಣ ತೀರಿಸ ಬೇಕೆ ಹೊರತು ಇಲ್ಲಿರುವುದನ್ನೇ ಸ್ಥಳಾಂತರ ಮಾಡುತ್ತಿರುವ ಆಲೋಚನೆ ಸರಿಯಲ್ಲ. ಹೀಗಾಗಿ ಪಾಸ್ ಪೋರ್ಟ್ ಸೇವಾ ಕೇಂದ್ರ ಸ್ಥಳಾಂತರವಾಗಲು ಬಿಡದೇ ತಾಲೂಕು ಕೇಂದ್ರದಲ್ಲೇ ಉಳಿಸಿಕೊಳ್ಳಲಾಗುವುದು. ಕೇಂದ್ರ ಸಚಿವರು ಬೇಕಿದ್ದರೆ ಸರ್ಕಾರದ ಜೊತೆ ಚರ್ಚಿಸಿ ಮಂಡ್ಯ ನಗರದಲ್ಲಿ ಮತ್ತೊಂದು ಉಪ ಕೇಂದ್ರ ತೆರೆಯಲಿ ಎಂದು ಸಲಹೆ ನೀಡಿದರು.
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಆಡಳಿತಾವಧಿಯಲ್ಲಿ ಬೆಂಗಳೂರು – ಮೈಸೂರು ಚತುಷ್ಪಥ ರಸ್ತೆಯನ್ನು ನಿರ್ಮಿಸಲಾಗಿತ್ತು. ಅದಾದ ಬಳಿಕ ಒಂದೆರಡು ಬಾರಿ ಡಾಂಬರೀಕರಣ ಮಾಡಲಾಗಿತ್ತು. ಆದರೆ, ದಶಪಥ ಹೆದ್ದಾರಿ ಕಾಮಗಾರಿಯಿಂದಾಗಿ ಚತುಷ್ಪಥ ರಸ್ತೆ ಸಾಕಷ್ಟು ಅಧ್ವಾನಗೊಂಡಿತ್ತು. ಹೀಗಾಗಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆ ಚರ್ಚಿಸಿ ಮರು ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.
ಇನ್ನು ಸೆ.9 ರಂದು ಮದ್ದೂರು ಪುರಸಭಾ ಅಧ್ಯಕ್ಷ -ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ಈಗಾಗಲೇ ಜೆಡಿಎಸ್ ಪಕ್ಷಕ್ಕೆ ಬಹುಮತವಿದೆ. ನಮ್ಮ ಪಕ್ಷದಿಂದ ಅಧಿಕೃತವಾಗಿ 3 ಮಂದಿ ಸದಸ್ಯರಿದ್ದು, ಅವರ ಜೊತೆಗೆ ಪಕ್ಷೇತರ ಸದಸ್ಯರು ಹಾಗೂ ಜೆಡಿಎಸ್ ಸದಸ್ಯರು
ನಮ್ಮ ಕಾರ್ಯ ವೈಖರಿ ಹಾಗೂ ಪಟ್ಟಣದ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದರೇ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದರು.