ಮಧುಮೇಹಿಗಳಿಗೆ ಕೆಲವು ಹಣ್ಣುಗಳು ಔಷಧದಂತೆ ಕೆಲಸ ಮಾಡುತ್ತವೆ.. ಅಂತವುಗಳಲ್ಲಿ ಅಂಜೂರವೂ ಒಂದು.. ಈ ಹಣ್ಣುದೇಹದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗದಂತೆ ನೋಡಿಕೊಳ್ಳುತ್ತವೆ.. ಹಾಗಾದ್ರೆ ಇವುಗಳನ್ನು ತಿನ್ನುವುದು ಹೇಗೆ ಎಂದು ಇಲ್ಲಿ ತಿಳಿಯೋಣ
ನೆನೆಸಿದ ಅಂಜೂರದ ಹಣ್ಣುಗಳನ್ನು ತಿನ್ನುವುದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡಲು ತುಂಬಾ ಪ್ರಯೋಜನಕಾರಿಯಾಗಿದೆ. ಅಂಜೂರದಲ್ಲಿ ನಾರಿನಂಶ ಅಧಿಕವಾಗಿದ್ದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರವಾಗಿಡಲು ಸಹಾಯ ಮಾಡುತ್ತದೆ.
ಅಂಜೂರದ ಹಣ್ಣುಗಳನ್ನು ನೇರವಾಗಿ ತಿನ್ನುವುದಕ್ಕಿಂತ ರಾತ್ರಿ ನೀರಲ್ಲಿ ನೆನಸಿಟ್ಟು ಬೆಳಗಿನ ಜಾವ ಖಾಲಿ ಹೊಟ್ಟೆಯಲ್ಲಿ ತಿಂದ್ರೆ ಮಧುಮೇಹ ಎಷ್ಟೇ ಇದ್ದೂ ನಿಯಂತ್ರಣಕ್ಕೆ ಬರುತ್ತದೆ..
ನೆನೆಸಿದ ಅಂಜೂರದ ಹಣ್ಣುಗಳನ್ನು ಸೇವಿಸುವುದರಿಂದ, ದೇಹದಲ್ಲಿ ಗ್ಲೂಕೋಸ್ ಮಟ್ಟವು ಕ್ರಮೇಣ ಹೆಚ್ಚಾಗುತ್ತದೆ, ಅದರೊಂದಿಗೆ ರಕ್ತದಲ್ಲಿನ ಸಕ್ಕರೆಯ ಮಟ್ಟವು ನಿಯಂತ್ರಣದಲ್ಲಿರುತ್ತದೆ.
ಅಂಜೂರದಲ್ಲಿ ನಾರಿನಂಶ ಹೆಚ್ಚಿದ್ದು ಜೀರ್ಣಾಂಗ ವ್ಯವಸ್ಥೆಗೆ ತುಂಬಾ ಪ್ರಯೋಜನಕಾರಿ. ಅಂಜೂರದ ನಿಯಮಿತ ಸೇವನೆಯು ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಬಲವಾಗಿ ಮತ್ತು ಆರೋಗ್ಯಕರವಾಗಿರಿಸುತ್ತದೆ