ಬೆಂಗಳೂರು:– ಮುಂದಿನ ವಾರದಿಂದ ಕರ್ನಾಟಕದಲ್ಲಿ ಮಳೆ ಅಬ್ಬರ ಜೋರಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಎಚ್ಎಎಲ್ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.