ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಮಳೆಯಾಗಲಿದೆ.
ಎಚ್ಎಎಲ್ನಲ್ಲಿ 28.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.