ಬಾಲಿವುಡ್ನ ಖ್ಯಾತ ನಟಿ, ಮಾಡೆಲ್ ಮಲೈಕಾ ಅರೋರಾ ಅವರ ತಂದೆ ಅನಿಲ್ ಅರೋರಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಂಬೈನ ತಮ್ಮ ಮನೆಯ ಮೇಲ್ಛಾವಣಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. 75 ವರ್ಷದ ಅನಿಲ್ ಅರೋರಾ ಮುಂಬೈನ ಬಾಂದ್ರಾದಲ್ಲಿ ವಾಸವಿದ್ದರು. ಅವರಿಗೆ ಸುಮಾರು 75 ವರ್ಷ ವಯಸ್ಸಾಗಿತ್ತು.
ಮಲೈಕಾ ಅರೋರಾ ಚಿತ್ರೀಕರಣಕ್ಕಾಗಿ ಪುನಾಕ್ಕೆ ತೆರಳಿದ್ದರು. ವಿಷಯ ತಿಳಿಯುತ್ತಿದ್ದಂತೆ ಮುಂಬೈಗೆ ರವಾನೆಯಾಗಿದ್ದಾರೆ. ಮಲೈಕಾ ಅರೋರಾರ ಸಹೋದರಿ ಅಮೃತ್ ಅರೋರಾ ಸಹ ತಂದೆಯ ಸಾವಿನ ವಿಷಯ ತಿಳಿದು ಮುಂಬೈಗೆ ವಾಪಸ್ಸಾಗಿದ್ದಾರೆ. ಮಲೈಕಾ ಅರೋರಾರ ತಂದೆ ಅನಿಲ್ ಅರೋರಾ ಭಾರತದ ಮರ್ಚೆಂಟ್ ನೇವಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ.
ಅನಿಲ್ ಅರೋರಾರ ಮೃತ ದೇಹವನ್ನು ಮುಂಬೈನ ಬಾಬಾ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ದೇಹದ ಮರಣೋತ್ತರ ಪರೀಕ್ಷೆಯ ಬಳಿಕ ಸಂಬಂಧಿಗಳಿಗೆ ನೀಡಲಾಗುವುದೆಂದು ತಿಳಿಸಲಾಗಿದೆ. ಅನಿಲ್ ಅವರದ್ದು ಆತ್ಮಹತ್ಯೆಯೋ ಅಥವಾ ಕಾಲು ಜಾರಿ ಬಿದ್ದರೋ ಎಂಬ ಬಗ್ಗೆ ಅನುಮಾನವಿರುವುದಾಗಿ ಪೊಲೀಸರು ಹೇಳಿದ್ದಾರೆ. ಅನಿಲ್ ಅರೋರಾ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಮಲೈಕಾ ಅರೋರಾರ ಮಾಜಿ ಪತಿ, ಸಲ್ಮಾನ್ ಖಾನ್ ಸಹೋದರ ಅರ್ಬಾಜ್ ಖಾನ್, ಮಲೈಕಾರ ಬಾಂದ್ರಾದ ಮನೆಗೆ ಆಗಮಿಸಿದ್ದಾರೆ.
ಮಲೈಕಾ ಅರೋರಾ ಹಾಗೂ ಅಮೃತ್ ಅರೋರಾ ಇಬ್ಬರೂ ಸಹ ಮಾಡೆಲ್ಗಳಾಗಿ ಗುರುತಿಸಿಕೊಂಡರು. ಬಳಿಕ ಚಿತ್ರರಂಗಕ್ಕೂ ಎಂಟ್ರಿ ನೀಡಿದರು. ಮಲೈಕಾ ಅರೋರಾ, ಸಲ್ಮಾನ್ ಖಾನ್ ಸಹೋದರ ಅರ್ಬಾಜ್ ಖಾನ್ ದಶಕಕ್ಕೂ ಹೆಚ್ಚು ಕಾಲ ದಾಂಪತ್ಯದಲ್ಲಿದ್ದರು. ಅವರಿಗೆ ಒಬ್ಬ ಮಗನಿದ್ದಾನೆ. ಬಳಿಕ ಅರ್ಬಾಜ್ಗೆ ವಿಚ್ಛೇದನ ನೀಡಿ, ತನಗಿಂತಲೂ ಬಹಳ ಕಿರಿಯರಾದ ಅರ್ಜುನ್ ಕಪೂರ್ ಜೊತೆಗೆ ಲಿವ್ ಇನ್ ರಿಲೇಷನ್ಶಿಪ್ನಲ್ಲಿ ತೊಡಗಿಕೊಂಡರು. ಇತ್ತೀಚೆಗೆ ಅರ್ಜುನ್ ಕಪೂರ್ ಜೊತೆಗೂ ಸಹ ಮಲೈಕಾ ಬ್ರೇಕಪ್ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು.