ರಷ್ಯಾ-ಉಕ್ರೇನ್ ಸಂಘರ್ಷಕ್ಕೆ ಪರಿಹಾರದ ಭಾಗವಾಗಿ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಗುರುವಾರ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ರಷ್ಯಾದ ಸೇಂಟ್ ಪೀಟರ್ಸ್ಬರ್ಗ್ನಲ್ಲಿ ನಡೆಯುತ್ತಿರುವ ಬ್ರಿಕ್ಸ್(ಬ್ರೆಜಿಲ್, ರಷ್ಯಾ, ಭಾರತ, ಚೀನ, ದಕ್ಷಿಣ ಆಫ್ರಿಕಾ)ನ ರಾಷ್ಟ್ರೀ ಯ ಭದ್ರತಾ ಸಲಹೆಗಾರರ ಸಮಾವೇಶದ ವೇಳೆ ಈ ಮಾತುಕತೆ ನಡೆಸಲಾಗಿದೆ.ಈ ವೇಳೆ, ದೋವಲ್ ಜತೆಗಿನ ಮಾತುಕತೆಯಲ್ಲಿ ರಷ್ಯಾದ ಕಝನ್ನಲ್ಲಿ ಅಕ್ಟೋಬರ್ನಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಕ್ಕೆ ಪ್ರಧಾನಿ ಮೋದಿ ಅವರನ್ನು ಪುಟಿನ್ ಆಹ್ವಾನಿಸಿದ್ದು ಮೋದಿ ಭೇಟಿಗೆ ಕಾಯುತ್ತಿದ್ದೇನೆ ಎಂದು ಪುಟಿನ್ ತಿಳಿಸಿದ್ದಾರೆ.
ಇದಕ್ಕೂ ಮೊದಲು ದೋವಲ್, ರಷ್ಯಾದ ರಾಷ್ಟ್ರೀಯ ಭದ್ರತಾ ಸಲಹೆಗಾರ ಸೆರ್ಗೆಯ್ ಶೋಯಿಗು ಜತೆಗೂ ಮಾತುಕತೆ ನಡೆಸಿದರು. ಈ ವೇಳೆ, ಪ್ರಧಾನಿ ಮೋದಿ ಇತ್ತೀಚೆಗೆ ಉಕ್ರೇನ್ ಭೇಟಿ ನೀಡಿದ್ದು, ಮಾತುಕತೆ ನಡೆಸಿದ್ದರ ಮಾಹಿತಿಯನ್ನು ಹಂಚಿಕೊಂಡಿ ದ್ದಾರೆ. ಈ ಮಧ್ಯೆ, ಉಕ್ರೇನ್-ರಷ್ಯಾ ಸಂಘರ್ಷ ನಿವಾರಣೆಯಲ್ಲಿ ಭಾರತ, ಚೀನ ಮಹತ್ವದ ಪಾತ್ರವನ್ನು ನಿರ್ವಹಣೆ ಮಾಡಬಹುದು ಎಂದು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಪುನರುಚ್ಚರಿಸಿದ್ದಾರೆ.