ಬೆಂಗಳೂರು: ಕೆಲಸ ಮಾಡುತ್ತಿದ್ದ ಮಾಲೀಕರ ಮನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದ ಮನೆ ಕೆಲಸದಾಕೆಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಿಹಾರ ಮೂಲದ ಪಿಂಕಿದೇವಿ ಬಂಧಿತ ಆರೋಪಿತೆಯಾಗಿದ್ದು, ಸಾಫ್ಟ್ ವೇರ್ ಉದ್ಯೋಗಿ ಮನೆಯಲ್ಲಿ ಕೆಲಸಕ್ಕಿದ್ದ ಪಿಂಕಿದೇವಿ, ಕೆಲಸ ಮಾಡಿಕೊಂಡೇ ಮನೆಯಲ್ಲಿರುವ ಚಿನ್ನಾಭರಣಗಳನ್ನು ಕದ್ದು ಬಿಹಾರಕ್ಕೆ ಪರಾರಿಯಾಗಿದ್ದಳು.
ಇನ್ನೂ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದ ಪೊಲೀಸರು ಬಿಹಾರಕ್ಕೆ ತೆರಳಿ ಆರೋಪಿತೆಯನ್ನ ಬಂಧಿಸಿ ಕರೆತಂದಿದ್ದಾರೆ. ಇನ್ನೂ ಬಂಧಿತ ಆರೋಪಿತೆಯಿಂದ 54 ಲಕ್ಷ ಮೌಲ್ಯದ 570 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.