ಇಸ್ಲಾಮಾಬಾದ್ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ 6.5 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ಸ್ವಾತ್ ಕಣಿವೆ ಪ್ರದೇಶದಲ್ಲಿ ಕನಿಷ್ಠ ಒಂಬತ್ತು ಜನರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಘಟನೆಯಲ್ಲಿ 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಮಂಗಳವಾರ ರಾತ್ರಿ ದೆಹಲಿ-ಎನ್ಸಿಆರ್ ಮತ್ತು ಉತ್ತರ ಭಾರತದಾದ್ಯಂತ ಭೂಕಂಪದಿಂದ ಪ್ರಬಲವಾದ ಕಂಪನಗಳು ಸಂಭವಿಸಿದ್ದು, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಬಹುಭಾಗವನ್ನು ತಲ್ಲಣಗೊಂಡಿದೆ. ಇದರಿಂದ ಭಯಭೀತರಾದ ನಿವಾಸಿಗಳು ಮನೆ ಮತ್ತು ಕಚೇರಿಗಳಿಂದ ಹೊರಗೆ ಓಡಿ ಬಂದಿದ್ದಾರೆ. ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಸ್ವಾತ್ ಕಣಿವೆ ಪ್ರದೇಶದಲ್ಲಿ 100 ಕ್ಕೂ ಹೆಚ್ಚು ಜನರನ್ನು ಆಘಾತದ ಸ್ಥಿತಿಯಲ್ಲಿ ಆಸ್ಪತ್ರೆಗಳಿಗೆ ಕರೆತರಲಾಗಿದೆ ಎಂದು ಪಾಕಿಸ್ತಾನದ ತುರ್ತು ಸೇವೆಗಳ ವಕ್ತಾರ ಬಿಲಾಲ್ ಫೈಜಿ ಅಸೋಸಿಯೇಟೆಡ್ ಪ್ರೆಸ್ಗೆ ಮಾಹಿತಿ ನೀಡಿದ್ದಾರೆ.