ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ ದನಟ ದರ್ಶನ್ ಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಲಾಗಿತ್ತು. ಇದು ಸಾಕಷ್ಟು ಟೀಕೆಗೆ ಒಳಗಾದ ಬಳಿಕ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಯಿತು. ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಕಳುಹಿಸಿ 15 ದಿನ ಕಳೆದಿದ್ದು ಅಲ್ಲಿನ ವಾತಾವರಣೆಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದೆ ದರ್ಶನ್ ಪರದಾಡುತ್ತಿದ್ದಾರೆ. ಈ ಮಧ್ಯೆ ಇಡೀ ರಾಜ್ಯದ ಕಾರಾಗೃಹಗಳಿಗೆ ಮಹತ್ವದ ಆದೇಶ ಹೊರಡಿಸಲಾಗಿದೆ.
ರೇಣುಕಾಸ್ವಾಮಿ ಕೊಲೆ ಆರೋಪಿಗೆ ಜೈಲಿನಲ್ಲಿ ಸಿಕ್ಕ ರಾಜಮರ್ಯಾದೆ, ರೌಡಿಶೀಟರ್ಗಳ ರಾಜಾತಿಥ್ಯ ಬೆಚ್ಚಿ ಬೀಳಿಸುವಂತೆ ಮಾಡಿತ್ತು. ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಯಾದ ಬಳಿಕ ರಾಜ್ಯ ಸರ್ಕಾರ ಜೈಲಿನ ರಾಜಾತಿಥ್ಯದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ.
ಜೈಲಿನಲ್ಲಿ ನಟ ದರ್ಶನ್ಗೆ ರಾಜ್ಯಾತಿಥ್ಯ ನೀಡಿದ ಬಳಿಕ ಕಾರಾಗೃಹ ಮತ್ತು ಸುಧಾರಣಾ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ. ಪ್ರಮುಖವಾಗಿ ಜೈಲರ್, ಮುಖ್ಯ ವೀಕ್ಷಕರ ವರ್ಗಾವಣೆ ಮಾಡಿ ಮಹತ್ವದ ಆದೇಶ ನೀಡಲಾಗಿದೆ. ಇದರ ಜೊತೆಗೆ ಜೈಲಿನಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳನ್ನ ತಡೆಯಲು 43 ಮುಖ್ಯ ವೀಕ್ಷಕರನ್ನ ವರ್ಗಾವಣೆ ಮಾಡಿ ರಾಜ್ಯ ಒಳಾಡಳಿತ ಇಲಾಖೆ ಆದೇಶ ನೀಡಿದೆ. ಇನ್ಮುಂದೆ ರಾಜ್ಯದಲ್ಲಿ ಕಾರಾಗೃಹದಲ್ಲಿರುವ ಕೈದಿಗಳಿಗೆ ಸಿಗೋ ಅನಧಿಕೃತ ಸೌಲಭ್ಯಗಳಿಗೆ ಬ್ರೇಕ್ ಹಾಕಲು ಸರ್ಕಾರ ತೀರ್ಮಾನಿಸಿದೆ.