ಮಂಗಳೂರು: ಪೊಲೀಸರ ಬಿಗಿ ಬಂದೋಬಸ್ತ್ನಲ್ಲಿ ಬಿ.ಸಿ ರೋಡ್ ಚಲೋ ಹಾಗೂ ಈದ್ ಮಿಲಾದ್ ಮೆರವಣಿಗೆ ಶಾಂತಿಯುತವಾಗಿ ನಡೆದಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಗಿರೀಶ್.ಎನ್ ತಿಳಿಸಿದ್ದಾರೆ.
ಬಜರಂಗದಳ ಹಾಗೂ ವಿಹೆಚ್ಪಿಯಿಂದ ಬಿ.ಸಿ ರೋಡ್ ಚಲೋ ಕರೆ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್ನಲ್ಲಿ ಜಮಾಯಿಸಿದ್ದರು. ಬಜರಂಗದಳ ಹಾಗೂ ವಿಹೆಚ್ಪಿಯ ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟ ನಡೆದಿತ್ತು. ಕೊನೆಗೆ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ
ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಎನ್.ಯತೀಶ್ ಮಾತನಾಡಿ, ಬಂಟ್ವಾಳದ ಬಿ.ಸಿ ರೋಡ್ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿದೆ. ದ.ಕ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಕೈಕಂಬ ಮಸೀದಿಯ ಈದ್ ಮಿಲಾದ್ ಮೆರವಣಿಗೆ ರೂಟ್ ಬದಲಾವಣೆ ನಾವು ಮಾಡಿಲ್ಲ. ಹಿಂದೂ ಸಂಘಟನೆಯವರು ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತೇವೆ ಎಂದಿದ್ದರು. ಹಾಗಾಗಿ ಬಿ.ಸಿ ರೋಡ್ ಜಂಕ್ಷನ್ನಲ್ಲಿ ಅವಕಾಶ ನೀಡಿದ್ದೇವು. ಏನಾದರೂ ಸಮಸ್ಯೆಯಾದರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದೇವೆ ಅಷ್ಟೇ ಎಂದು ತಿಳಿಸಿದರು.