ಕೋಲಾರ : ಯಾವುದೇ ಸಮಾಜವನ್ನು ಜಾತಿ ನಿಂದನೆ ಮಾಡುವ ಹಕ್ಕು ಯಾರಿಗೂ ಇಲ್ಲ. ಶಾಸಕ ಮುನಿರತ್ನ ಅವರು ನಿಂದನೆ ಮಾಡಿದ್ದರೆ ಕಾನೂನಾತ್ಮಕವಾಗಿ ಶಿಕ್ಷೆಗೆ ಒಳಗಾಗುತ್ತಾರೆ ಎಂದು ಶಾಸಕ ಕೊತ್ತೂರು ಮಂಜುನಾಥ್ ಅವ್ರು ಹೇಳಿದರು.
ಕೋಲಾರ ತಾಲೂಕಿನ ರಾಮಸಂದ್ರ ಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಮುನಿರತ್ನ ಅವರ ಬಂಧನದ ವಿಚಾರ ಮಾಧ್ಯಮಗಳಲ್ಲಿ ನೋಡಿದ್ದೇನೆ. ಜಿಲ್ಲೆಯ ನಂಗಲಿ ಟೋಲ್ ಬಳಿ ಹಿಡಿದುಕೊಂಡು ಹೋಗಿರುವುದು ನಿಜ. ಅದಾದ ಬಳಿಕ ಏನಾಗಿದೆ ಎನ್ನುವುದು ನನಗೆ ಗೊತ್ತಿಲ್ಲ, ನಿಂದನೆ ಮಾಡಿದ್ದರೆ ಅವರ ವಿರುದ್ಧ ಕಾನೂನು ಕ್ರಮವಾಗಲಿದೆ ಎಂದರು.
ಆಪರೇಷನ್ ಕಮಲಕ್ಕೆ ಒಳಗಾದವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎನ್ನುವುದು ಸುಳ್ಳು ಆರೋಪ. ನನಗೆ ಅದರ ಬಗ್ಗೆ ಮಾಹಿತಿ ಇಲ್ಲ, ತಿಳಿದುಕೊಂಡು ಹೇಳುವೆ ಎಂದು ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ಎಂಎಲ್ಸಿ ಅನಿಲ್ಕುಮಾರ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಮುಖಂಡರಾದ ಗೋಪಾಲಗೌಡ, ಗಂಗಣ್ಣ ಮುಂತಾದವರಿದ್ದರು.