ಗದಗ: ಸಚಿವ ಎಚ್ ಕೆ ಪಾಟೀಲ್ ನೇತೃತ್ವದಲ್ಲಿ ಗದಗ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ತಾಲೂಕಾವಾರು ಅರ್ಜಿ ಸ್ವೀಕಾರಕ್ಕೆ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಮಾಡಲಾಗಿದ್ದು
ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಲು ಮುಂದಾದರು. ರೋಣ ಶಾಸಕಜಿ ಎಸ್ ಪಾಟೀಲ್, ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿ .ಪಂ ಸಿಇಓ ಭರತ್ ಎಸ್ ಸೇರಿದಂತೆ ಅಪಾರ ಸಂಖ್ಯೆಯ ಸಾರ್ವಜನಿಕರು ಜನತಾ ದರ್ಶನದಲ್ಲಿ ಭಾಗಿಯಾಗಿದ್ದರು.