ಬೆಂಗಳೂರು: ಹೃದಯಾಘಾತದಿಂದ ಮಾಜಿ ಸಚಿವ ಅಂಜನಮೂರ್ತಿ(72) ನಿಧನರಾಗಿದ್ದಾರೆ. ಇಂದು ಮುಂಜಾನೆ ಮಲ್ಲೇಶ್ವರಂನ ಅಪೋಲೊ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ವಸತಿ ಸಚಿವರಾಗಿ, ಉಪಸಭಾಪತಿಯಾಗಿ ಅಂಜನಮೂರ್ತಿ ಕಾರ್ಯನಿರ್ವಹಿಸಿದ್ದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಇಂದಿರಾನಗರ ನಿವಾಸಿಯಾದ ಅಂಜನಮೂರ್ತಿ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಕಳೆದ ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಮಾಜಿ ಸಚಿವ ಅಂಜನಾಮೂರ್ತಿ ನಿಧನಕ್ಕೆ ಸಿಎಂ ಬೊಮ್ಮಾಯಿ ಸೇರಿದಂತೆ ಸಚಿವರು, ಶಾಸಕರು ಕಂಬನಿ ಮಿಡಿದಿದ್ದಾರೆ.ಕುಟುಂಬಕ್ಕೆ ಶಕ್ತಿ ಕೊಡುವಂತೆ ದೇವರಲ್ಲಿ ಪ್ರಾರ್ಥಿಸಿರುವ ಗಣ್ಯರು.