ಬೆಂಗಳೂರು:- ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ ನೀಡಿ ಜಾತಿ ನಿಂದನೆ ಆರೋಪ ಪ್ರಕರಣ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.
ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಶಾಸಕ ಮುನಿರತ್ನ ಸೇರಿದಂತೆ ಒಟ್ಟು 7 ಆರೋಪಿಗಳ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. IPC ಸೆಕ್ಷನ್ ವಿವಿದ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಕಗ್ಗಲೀಪುರದ ಖಾಸಗಿ ರೆಸಾರ್ಟ್ನಲ್ಲಿ ಅತ್ಯಾಚಾರ ನಡೆದಿರುವುದಾಗಿ ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಪೊಲೀಸರು ಈ ಸಂಬಂಧ ತನಿಖೆ ಕೈಗೊಂಡಿದ್ದಾರೆ.