ಬೆಂಗಳೂರು: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ನಿಧನ(84)ವಾಗಿದ್ದು ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಕೆಂಪಣ್ಣ ಹಾಗೆ ಕಾಂಗ್ರೆಸ್ ಸರ್ಕಾರದ ಮೇಲೆಯೂ ಕಮಿಷನ್ ಆರೋಪ ಮಾಡಿದ್ದ ಕೆಂಪಣ್ಣ
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಮೊನ್ನೆಯಷ್ಟೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿ ಮನೆಗೆ ವಾಪಾಸಾಗಿದ್ದರು.
ಇಂದು ಬೆಳಗ್ಗೆ 10 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ ಎಂದು ಕೆಂಪಣ್ಣ ಆಪ್ತರು, ಕುಟುಂಬದ ಮೂಲಗಳು ತಿಳಿಸಿವೆ.
ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದರು. ಆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿಗೂ ಪತ್ರ ಬರೆದು ಸಂಚಲನ ಸೃಷ್ಟಿಸಿದ್ದರು.